ಬೀದರ 26 ಜನರ ಗಂಟಲು ದ್ರವ ಮಾದರಿ ಪರೀಕ್ಷೆ- ಡಿಸಿ
ನಿಜಾಮುದ್ದೀನ್ ಜಮಾತ್ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಜಿಲ್ಲೆಯ ಜನ
ಬೀದರ: ನವದೆಹಲಿಯ ನಿಜಾಮುದ್ದೀನ್ ಜಮಾತ್ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಬೀದರ ಜಿಲ್ಲೆಯ 26 ಜನರ ಗಂಟಲು ದ್ರವ ಮಾದರಿಯನ್ನು ಕಲಬುರಗಿ ಲ್ಯಾಬ್ ಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್ ಮಹಾದೇವ ಮಾಹಿತಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಈಗಾಗಲೇ 26 ಎಲ್ಲರೂ ಗೃಹ ಬಂಧನ ಅವಧಿ ಪೂರ್ಣಗೊಳಿಸಿದ್ದಾರೆ. ದೆಹಲಿಯಿಂದ ಬಂದ 26 ಜನರಿಗೆ ಕೊರೊನಾ ಸೋಂಕಿನ ಯಾವ ಲಕ್ಷಣಗಳು ಕಂಡುಬಂದಿಲ್ಲ. ದೆಹಲಿಯಲ್ಲಿ ಸೋಂಕಿನ ಹೆಚ್ಚಿನ ಪ್ರಭಾವ ಕಂಡುಬಂದ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲಾ 26 ವ್ಯಕ್ತಿಗಳ ಮಾದರಿ ಪಡೆದು ಪರೀಕ್ಷೆ ನಡೆಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸ್ಯಾಂಪಲ್ ಕಲಬುರಗಿ ಲ್ಯಾಬ್ ಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ. ದೆಹಲಿಗೆ ಹೋಗಿ ಬಂದ ಬೀದರ್ ನಿವಾಸಿಯೊಬ್ಬನಿಗೆ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಎರೆಡು ಬಾರಿ ಪರೀಕ್ಷೆ ನಡೆಸಲಾಗಿದ್ದು, ವರದಿ ನೆಗೆಟಿವ್ ಬಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಧ್ಯ ಜಿಲ್ಲೆಯಲ್ಲಿ ಯಾವುದೇ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ ಎಂದು ಖಚಿತ ಪಡಿಸಿದ್ದಾರೆ.
Date: 31-03-2020 Time: 3:50PM
ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ
*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…
















