ಬೆಳೆ ವಿಮೆ ತಿರಸ್ಕೃತ ರೈತರು ಮನವಿ ಸಲ್ಲಿಸಲು ಕೃಷಿ ಇಲಾಖೆ ಜಂಟಿ ನಿರ್ದೆಶಕರ ಪತ್ರಿಕಾ ಪ್ರಕಟಣೆ
ಬೆಳೆ ವಿಮೆ ತಿರಸ್ಕೃತವೇ ರೈತರು ಕೂಡಲೆ ಸಲ್ಲಿಸಿ ಮನವಿ..
ಆಕ್ಷೇಪಣೆಗೆ ಅರ್ಜಿ ಆಹ್ವಾನ
———————
ಬೀದರ ಜನವರಿ 11 (ಕರ್ನಾಟಕ ವಾರ್ತೆ): ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (KRS-PMFBY) ಅಡಿಯಲ್ಲಿ 2020-21ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ರೈತರ ಬೆಳೆ ವಿಮೆಗೆ ನೋಂದಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ಸರ್ಕಾರದಿಂದ ಅನುಮೋದನೆಯಾದ ವಿನಾಯಿತಿಗಳನ್ನು ಅಳವಡಿಸಿ ತಾಳೆ ಆಗಿರುವ ಪ್ರಸ್ತಾವನೆಗಳಿಗೆ ಸಂರಕ್ಷಣೆ ತಂತ್ರಾAಶದಲ್ಲಿ ವಿಮಾ ಪರಿಹಾರ ಲೆಕ್ಕ ಹಾಕಲಾಗಿದೆ.
ತಾಳೆ ಆಗಲಾರದೆ ಇರುವ ಪ್ರಸ್ತಾವನೆಗಳನ್ನು ಸರ್ಕಾರದ ಆದೇಶದಂತೆ ಸಂಬAಧಪಟ್ಟ ತಾಲ್ಲೂಕು (ಕೃಷಿ/ ತೋಟಗಾರಿಕೆ/ ಬ್ಯಾಂಕ್) ಮಟ್ಟದ ಅಧಿಕಾರಿಗಳಿಗೆ ಪರಿಶೀಲಿಸಲು ತಂತ್ರಾAಶದ ಮೂಲಕ ಕಳುಹಿಸಲಾಗಿತ್ತು. ತಾಲ್ಲೂಕು ಮಟ್ಟದ ಅಧಿಕಾರಿಗಳು ಸದರಿ ಪ್ರಸ್ತಾವನೆಗಳನ್ನು ಪರಿಶೀಲಿಸಿ ಸಂಬAಧಪಟ್ಟ ವಿಮಾ ಸಂಸ್ಥೆಯವರಿಗೆ ವರ್ಗಾಯಿಸಿ, ಅಂತಿಮವಾಗಿ ವಿಮಾ ಸಂಸ್ಥೆಯವರು ಪ್ರಸ್ತಾವನೆಗಳನ್ನು Accept ಅಥವಾ
ಪ್ರಸ್ತುತ ವಿಮಾ ಸಂಸ್ಥೆಯಿAದ Reject ಆದ ಒಟ್ಟು 866 ಮುಂಗಾರು ಹಾಗೂ 40 ಹಿಂಗಾರು ಹಂಗಾಮಿನ ಪ್ರಸ್ತಾವನೆಗಳನ್ನು ಈಗಾಗಲೇ ಸಂಬAಧಪಟ್ಟ ರೈತ ಸಂಪರ್ಕ ಕೇಂದ್ರಗಳ ಸೂಚನಾ ಫಲಕಕ್ಕೆ ಲಗತ್ತಿಸಿ ಪ್ರಚಾರ ಪಡಿಸಲಾಗಿದೆ. 25.01.2023ರ ವರೆಗೆ 15 ದಿನಗಳ ಒಳಗೆ ರೈತರು ಅವರ ವಿಮಾ ಅರ್ಜಿ ತಿರಸ್ಕೃತಗೊಂಡ ಬಗ್ಗೆ ಮನವರಿಕೆ ಮಾಡಿಕೊಂಡು ಆಕ್ಷೇಪಣೆ ಇದ್ದಲ್ಲಿ ಮರು ಪರಿಶಿಲಿಸಲು ರೈತರ ಮನವಿಗಳನ್ನು ಸಂಬAಧಿಸಿರುವ ಹೊಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ/ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳಲ್ಲಿ ಮನವಿಗಳನ್ನು ಸಲ್ಲಿಸಲು ಬೀದರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…
















