Home ನಿಮ್ಮ ಜಿಲ್ಲೆ ಬೀದರ ಮತದಾರರ ಮಿಂಚಿನ ನೋಂದಣಿ ಅಭಿಯಾನಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

ಮತದಾರರ ಮಿಂಚಿನ ನೋಂದಣಿ ಅಭಿಯಾನಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

ಬೀದರ: ಜಿಲ್ಲಾಡಳಿತದಿಂದ ಜ.8ರವರೆಗೆ ಜಿಲ್ಲೆಯಾದ್ಯಂತ ನಡೆಯಲಿರುವ ಮತದಾರರ ಮಿಂಚಿನ ನೋಂದಣಿ ಅಭಿಯಾನಕ್ಕೆ ಜಿಲ್ಲಾಧಿಕಾರಿಗಳಾದ ಡಾ.ಹೆಚ್.ಆರ್.ಮಹಾದೇವ್ ಅವರು ಜ.6ರಂದು ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಪ್ರಕ್ರಿಯೆ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿದೆ. ಪಟ್ಟಿಯಿಂದ ಬಿಟ್ಟು ಹೋದವರನ್ನು ಸೇರಿಸುವ ನಿಟ್ಟಿನಲ್ಲಿ ಮತದಾರರ ಮಿಂಚಿನ ನೋಂದಣಿ ಅಭಿಯಾನವನ್ನು ಏರ್ಪಡಿಸಲಾಗಿದ್ದು, 18 ವರ್ಷ ವಯಸ್ಸು ಪೂರ್ಣಗೊಂಡವರು ಹಾಗೂ ಮತದಾನಕ್ಕೆ ಅರ್ಹತೆ ಹೊಂದಿದ ಪ್ರತಿಯೊಬ್ಬರು ತಪ್ಪದೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ 70ರಿಂದ 80ರಷ್ಟು ಜನರು ಮಾತ್ರ ಮತದಾರರ ಗುರುಚಿನ ಚೀಟಿ ಹೊಂದಿದ್ದಾರೆ. ಶೇ.100ರಷ್ಟು ಜನರಿಗೆ ಮತದಾರರ ಗುರುತಿನ ಚೀಟಿಯನ್ನು ಕಲ್ಪಿಸುವ ಉದ್ದೇಶ ಜಿಲ್ಲಾಡಳಿತ ಹೊಂದಿದೆ. ಅದರಂತೆ ಮತದಾನಕ್ಕೆ ಅರ್ಹತೆ ಹೊಂದಿದವರು ಅರ್ಜಿ ನಮೂನೆ-6ನ್ನು ಹತ್ತಿರದ ಬಿಎಲ್‌ಓ ಅಥವಾ ಶಾಲಾ ಕಾಲೇಜುಗಳಲ್ಲಿ ಸಲ್ಲಿಸಬೇಕು ಎಂದರು.
ಮತದಾರರ ಗುರುತಿನ ಚೀಟಿಯು ಮಹತ್ವದ ದಾಖಲೆಯಾಗಿದ್ದು, ಹಲವು ಕೆಲಸ ಕಾರ್ಯಗಳಿಗೆ ಅವಶ್ಯಕವಾಗಿರುತ್ತದೆ. ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಮತ್ತು ನೆರೆಹೊರೆಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯಾಗದೇ ಇರುವವರು ಇದ್ದಲ್ಲಿ ಅವರಿಗೆ ಸೂಕ್ತ ತಿಳುವಳಿಕೆ ನೀಡಬೇಕು ಎಂದು ಹೇಳಿದರು.
ಸ್ವೀಪ್ ಸಮಿತಿಯ ಜಿಲ್ಲಾ ನೋಡಲ್ ಅಧಿಕಾರಿ ಡಾ.ಗೌತಮ ಅರಳಿ ಅವರು ಮಾತನಾಡಿ, 2020ರ ಜನವರಿ 1ಕ್ಕೆ 18 ವರ್ಷ ವಯಸ್ಸು ಪೂರ್ಣಗೊಂಡವರನ್ನು ಮತದಾರರ ಪಟ್ಟಿಗೆ ಸೇರಿಸುವ ದಿಶೆಯಲ್ಲಿ ಜಿಲ್ಲೆಯಾದ್ಯಂತ ಮಿಂಚಿನ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಗಿದೆ. ಮತದಾನಕ್ಕೆ ಅರ್ಹತೆ ಪಡೆದ ಎಲ್ಲರೂ ನಮೂನೆ 6ರ ಮೂಲಕ ಅರ್ಜಿ ಸಲ್ಲಿಸಿ ಮತದಾರರ ಗುರುತಿನ ಚೀಟಿ ಪಡೆಯಬಹುದು ಎಂದು ತಿಳಿಸಿದರು.
ಕಂದಾಯ ಇಲಾಖೆ, ಶಾಲಾ ಕಾಲೇಜುಗಳು ಹಾಗೂ ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಭಾಗವಹಿಸುತ್ತಿದ್ದು, ಉತ್ತಮ ಕೆಲಸ ಮಾಡುವ ಕಾಲೇಜುಗಳಿಗೆ ಜ.25ರಂದು ನಡೆಯುವ ರಾಷ್ಟಿçÃಯ ಮತದಾರರ ದಿನದಂದು ಉತ್ತಮ ಕಾಲೇಜು ಎನ್ನುವ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತದೆ. ವಿದ್ಯಾರ್ಥಿಗಳು ತಾವು ಅರ್ಜಿ ಸಲ್ಲಿಸಿ ತಮ್ಮ ಸುತ್ತಮುತ್ತಲಿನಲ್ಲಿರುವವರಿಗೂ ಸಹ ಅರ್ಜಿ ಸಲ್ಲಿಸುವಂತೆ ತಿಳಿ ಹೇಳಬೇಕು. ವಾಟ್ಸ್ಆ್ಯಪ್, ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣಗಳ ಮೂಲಕವೂ ಹೆಚ್ಚಿನ ಜನರಿಗೆ ಮಿಂಚಿನ ನೋಂದಣಿಯ ಬಗ್ಗೆ ಮಾಹಿತಿ ನೀಡಬೇಕು ಎಂದು ಕೋರಿದರು.
ತಹಸೀಲ್ದಾರರಾದ ಕೀರ್ತಿ ಚಾಲಕ್ ಅವರು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಮಹತ್ವದ್ದಾಗಿರುತ್ತದೆ. ಅರ್ಹರಿಗೆ ಮತದಾರರ ಗುರುತಿನ ಚೀಟಿ ನೀಡಲು ಸರ್ಕಾರದಿಂದ ಉತ್ತಮ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಸಲಹೆ ಮಾಡಿದರು.
ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಶಿವಶಂಕರ ಟೋಕರೆ ಅವರು ಪ್ರಸ್ತಾವಿಕ ಮಾತನಾಡಿ, ಕಳೆದ ಚುನಾವಣೆ ಸಂದರ್ಭದಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿAದ ಸುಮಾರು 300 ಗ್ರಾಮಗಳಲ್ಲಿ ಸುಮಾರು 31,000 ಜನರಿಗೆ ಮತದಾನದ ಅರಿವು ಮೂಡಿಸಲಾಗಿದೆ. ಮತದಾರರ ಪಟ್ಟಿಗೆ ಹೊಸ ಮತದಾರರನ್ನು ಸೇರಿಸಲು ನಿರಂತರ ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು 18 ವರ್ಷ ಪೂರ್ಣಗೊಂಡ ವಿದ್ಯಾರ್ಥಿಗಳಿಗೆ ಅರ್ಜಿ ನಮೂನೆ-6 ವಿತರಿಸಿದರು. ಕಾರ್ಯಕ್ರಮದಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆಡಳಿತಾಧಿಕಾರಿ ಪ್ರಕಾಶ ಜನವಾಡಕರ್, ಕಮಲಾಬಾಯಿ ದಿಕ್ಷಿತ್, ಚುನಾವಣಾ ಶಾಖೆಯ ಅಧಿಕಾರಿಗಳು, ಐಟಿಐ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

Date: 06-01-2020  Time:6:30PM

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…