ಮನಾಎಖೇಳ್ಳಿ – ರಸ್ತೆ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು
ಮನಾಎಖೇಳ್ಳಿ – ರಸ್ತೆ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು
ಚಿಟಗುಪ್ಪ: ಲಾರಿಗೆ ಓವರ್ ಟೆಕ್ ಮಾಡಲು ಹೋಗಿ ಮನ್ನಾಎಖೇಳ್ಳಿ ಹೊರ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 65ರ ಗುಲಷಾನ್ ಧಾಬಾ ಹತ್ತಿರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ ಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ.
https://play.google.com/store/apps/details?id=kknewsonline.in
ಅಪಘಾತದಲ್ಲಿ ಇಮ್ತಿಯಾಜ (40) ಹಾಗೂ ಮನಸೂರ ಅಹ್ಮದ್ (28) ಮೃತಪಟ್ಟ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ ಇಂಪ್ತಿಯಾಜ್ ಹಾಗೂ ಶೇಕ್ ಮಹ್ಮದ್ ಪಾಶಾ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಭೇರೆ ಆಸ್ಪತ್ರೆಗೆ ರವಾನಿಸಲಾಗಿದೆ. ಆಂದ್ರಪ್ರದೇಶದ ಕಡಪ್ಪ ಜಿಲ್ಲೆಯವರು ಎಂದು ತಿಳಿದುಬಂದಿದೆ. ಮಹಾರಾಷ್ಟ್ರಕ್ಕೆ ತೆರಳುವ ಮಧ್ಯದಲ್ಲಿ ಅಪಘಾತ ಸಂಭವಿಸಿದೆ. ಹೆಚ್ಚಿನ ಮಾಹಿತಿ ಪೊಲೀಸ್ ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ.
Date: 10-06-2020 :
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …
















