ಮನೆಯಿಲ್ಲದ ನಿರ್ಗತಿಕರಿಗೆ ಆಹಾರ ಪೊಟ್ಟಣ ವಿತರಣೆ
ಬೆಂಗಳೂರು ಗ್ರಾಮಾಂತರಃ ಕೊರೋನ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಯಿರುವ ಹಿನ್ನೆಲೆ ದೇವನಹಳ್ಳಿ ಪುರಸಭೆ ವತಿಯಿಂದ ಮನೆಯಿಲ್ಲದ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ನಿರ್ಗತಿಕರಿಗೆ, ಅನಾಥರಿಗೆ, ಕೂಲಿ ಕಾರ್ಮಿಕರಿಗೆ, ವಲಸೆ ಕಾರ್ಮಿಕರಿಗೆ, ಭಿಕ್ಷುಕರಿಗೆ ಸಿಬ್ಬಂದಿಗಳು ಆಹಾರ ಪೊಟ್ಟಣ ವಿತರಣೆ ಮಾಡಲಾಗುತ್ತಿದೆ.
ಕೂಲಿ ಕಾರ್ಮಿಕರಿಗೆ ಮಾಸ್ಕ್ ಹಾಗೂ ಆಹಾರ ಪೊಟ್ಟಣ ವಿತರಿಸಿದ ದೇವನಹಳ್ಳಿ ಶಾಸಕ ನಾರಾಯಣಸ್ವಾಮಿ

ಕೊರೋನ ವೈರಸ್ ಸೋಂಕು ಹಾಗೂ ಇನ್ನಿತರ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಹಿನ್ನಲೆ, ವೈರಸ್ ಸೋಂಕು ಹರಡದಂತೆ ನಿಯಂತ್ರಣಕ್ಕಾಗಿ ದೇವನಹಳ್ಳಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ಅವರು ಕೂಲಿ ಕಾರ್ಮಿಕರಿಗೆ, ವಲಸೆ ಕಾರ್ಮಿಕರಿಗೆ, ಪೌರ ಕಾರ್ಮಿಕರಿಗೆ ಮಾಸ್ಕ್ ಹಾಗೂ ಆಹಾರ ಪೊಟ್ಟಣ ವಿತರಿಸಿದರು. ದೇವನಹಳ್ಳಿ ಪುರಸಭೆ ಮುಖ್ಯಾಧಿಕಾರಿ ಹನುಮಂತೇಗೌಡ ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.
Date: 29-03-2020

















