ಮಹಾರಾಷ್ಟ್ರ– ದೇವೇಂದ್ರ ಫಡ್ನವಿಸ್ ಮತ್ತೆ ಅಧಿಕಾರಕ್ಕೆ
ಬಿಜೆಪಿಗೆ ಶುಕ್ರದಶೆ-ಫಡ್ನವಿಸ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ
ಮುಂಬೈ: ಮಹಾರಾಷ್ಟ್ರ ಸರ್ಕಾರ ರಚನೆಯ ಬಿಕ್ಕಟ್ಟಿಗೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದ್ದು, ಶಿವಸೇನೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಿ ಮತ್ತೆ ಬಿಜೆಪಿಯ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ
ಚುನಾವಣೆಯಲ್ಲಿ 288 ಸ್ಥಾನಗಳ ಪೈಕಿ ಬಿಜೆಪಿ 105 ಸ್ಥಾನ, ಶಿವಸೇನೆ 56 ಸ್ಥಾನ, ಎನ್‍ಸಿಪಿ 54 ಸ್ಥಾನ ಹಾಗೂ ಕಾಂಗ್ರೆಸ್ 44 ಸ್ಥಾನಗಳನ್ನು ಪಡೆದುಕೊಂಡಿತ್ತು. ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದ ಬಿಜೆಪಿ ಜೊತೆ ಕೈಜೊಡಿಸಿ ಸರ್ಕಾರ ರಚಿಸಲು ಶಿವಸೇನೆ ಅನೇಕ ಬೇಡಿಕೆಗಳನ್ನು ಬಿಜೆಪಿ ಮುಂದಿಟ್ಟಿತ್ತು. ಮುಖ್ಯಮಂತ್ರಿ ಸ್ಥಾನ ಶಿವಸೇನೆ ಪಕ್ಷಕ್ಕೆ ಬಿಟ್ಟುಕೊಡಬೇಕು, ಅಲ್ಲದೆ, ಸಚಿವ ಸಂಪುಟದಲ್ಲಿ ಸಮವಾಗಿ ಸ್ಥಾನಗಳನ್ನು ಹಂಚಬೇಕು ಎಂದು ಪಟ್ಟು ಹಿಡಿದಿತ್ತು. ಇದಕ್ಕೆ ಬಿಜೆಪಿ ಮುಖಂಡರು ಒಪ್ಪಿಗೆ ನೀಡದ ಕಾರಣ ರಾಜಕೀಯ ಬಿಕಟ್ಟು ಎದುರಾಗಿತ್ತು.
ಇದೇ ಕಾರಣಕ್ಕೆ ಕಾಂಗ್ರೆಸ್ ಹೇಗಾದರೂ ಶಿವಸೇನೆ, ಎನ್‍ಸಿಪಿ ವಿಶ್ವಾಸಗಳಿಸಿ ಸರ್ಕಾರ ರಚನೆ ಮಾಡಲು ಹೊಸ ಮಾಸ್ಟರ್ ಪ್ಲಾನ್ ತಯಾರಿಸಿತ್ತು. ಅಲ್ಲದೆ, ಶಿವಸೇನಾದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದು ಬಹುತೇಕ ಖಚಿತ ಎಂದು ಶುಕ್ರವಾರ ಸಂಜೆ ವರೆಗೂ ಚರ್ಚೆಗಳು ನಡೆದಿತ್ತು. ಆದರೆ ಈಗ ಎಲ್ಲಾ ಪ್ರಯತ್ನಕ್ಕೂ ತಣ್ಣಿರು ನೀರೆರಚಿದಂತೆ ಆಗಿದ್ದು, ಸದ್ದಿಲ್ಲದೆ ಬಿಜೆಪಿ ಎನ್‍ಸಿಪಿ ಜೊತೆ ಸೇರಿಕೊಂಡು ಮತ್ತೆ ದೇವೇಂದ್ರ ಫಡ್ನವಿಸ್ ಸಿಎಂ ಆಗಿ, ಎನ್.ಸಿ.ಪಿಯ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಮಹಾರಾಷ್ಟ್ರ ರಾಜಕೀಯದಲ್ಲಿ ಆದ ಈ ಬೆಳವಣಿಗೆ ಎಲ್ಲರನ್ನು ಅಚ್ಚರಿಗೊಳಿಸಿದೆ.
ರಾಜಭವನದಲ್ಲಿ ರಾಜ್ಯಪಾಲರ ಸಮ್ಮುಖದಲ್ಲಿ ಶನಿವಾರ ಮುಖ್ಯಮಂತ್ರಿಯಾಗಿ ಮತ್ತೆ ದೇವೇಂದ್ರ ಫಡ್ನವಿಸ್ ಪದಗ್ರಹಣ ಮಾಡಿದ್ದು, ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಅವರು ಪ್ರಮಾಣವಚಣ ಸ್ವೀಕರಿಸಿದ್ದಾರೆ.
Date:23-11-2019
ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ
*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…
















