ಹುಮನಾಬಾದ: ಶ್ರೀ ಮಾಣಿಕಪ್ರಭು ಜನ್ಮೋತ್ಸವ ಹಾಗೂ ದತ್ತ ಜಯಂತಿ ನಿಮಿತ್ಯ ಮಾಣಿಕನಗರದ ಮಾಣಿಕಪ್ರಭು ಸಂಸ್ಥಾನದ ಪ್ರಾಂಗಣದಲ್ಲಿ ಶನಿವಾರ ಗಣಪತಿ ಹೋಮ-ಹವನ ನಡೆಸುವ ಮೂಲಕ ಜಾತ್ರೆಗೆ ಚಾಲನೆ ನೀಡಲಾಯಿತು.

ಇದೇ ಸಂದರ್ಭದಲ್ಲಿ ಶ್ರೀ ಮಾಣಿಕ ಪ್ರಭುಗಳ  ಸಂಜೀವಿನಿ ಸಮಾಧಿಗೆ ಮಹಾರುದ್ರಾಭಿಷೇಕ ನೆರವೇರಿತು. ವೇದ ಮಂತ್ರ ಘೋಷಣೆಯೊಂದಿಗೆ ಅದ್ದೂರಿಯಾಗಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಸಂಸ್ಥಾನದ ಡಾ| ಜ್ಞಾನರಾಜ ಮಾಣಿಕಪ್ರಭುಗಳು ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.

Check Also

ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ

ಬೀದರ: ಬೀದರ‌ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …