Home ನಿಮ್ಮ ಜಿಲ್ಲೆ ಬೀದರ ಮಾಸ್ಕ್ ಧರಿಸು ಎಂದ ಅಧಿಕಾರಿ ಮೇಲೆ ಹಲ್ಲೆ – ಪ್ರಕರಣ ದಾಖಲು

ಮಾಸ್ಕ್ ಧರಿಸು ಎಂದ ಅಧಿಕಾರಿ ಮೇಲೆ ಹಲ್ಲೆ – ಪ್ರಕರಣ ದಾಖಲು

ಮಾಸ್ಕ್ ಧರಿಸು ಎಂದ ಅಧಿಕಾರಿ ಮೇಲೆ ಹಲ್ಲೆ – ಪ್ರಕರಣ ದಾಖಲು
ಕೋವಿಡ್ ನೋಡಲ್ ಅಧಿಕಾರಿ ಡಾ। ಗೊವಿಂದ್ ಮೇಲೆ ಹಲ್ಲೆ.

ಹುಮನಾಬಾದ: ಚಿಟಗುಪ್ಪ ಪಟ್ಟಣದಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಮಾಸ್ಕ್ ಧರಿಸುವಂತೆ ಹೇಳಿದ ಕಾರಣಕ್ಕೆ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಚಿಟಗುಪ್ಪ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಹೆಚ್ಚಿನ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ವಿವಿಧ ಬಡಾವಣೆಗೆ ತೆರಳಿ ಜನರಲ್ಲಿ ಜಾಗೃತಿ ಹಾಗೂ ಆರೋಗ್ಯ ತಪಾಸಣೆಗೆ ಮುಂದಾಗಿದ್ದಾರೆ. ಈ ಮಧ್ಯೆ ಪಟ್ಟಣದಲ್ಲಿರುವ ಜನರನ್ನು ಕಡ್ಡಾಯ ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸುವ ಕಾರ್ಯ ಕೂಡ ನಡೆಯುತ್ತಿದೆ.

ಆದರೆ ಸೋಮವಾರ ಮಾಸ್ಕ್ ಧರಿಸದ ವ್ಯಕ್ತಿಯೊಬ್ಬನಿಗೆ ಅಧಿಕಾರಿಗಳ ತಂಡ ಮಾಸ್ಕ್ ಧರಿಸುವಂತೆ ಎಚ್ಚರಿಸಿದ ಹಿನ್ನೆಲೆಯಲ್ಲಿ ಕೋವಿಡ್-19 ನೋಡಲ್ ಅಧಿಕಾರಿ ಡಾ। ಗೊವಿಂದ್ ಅವರ ಮೇಲೆ ಬಡಗೆಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಸ್ಥಳದಲ್ಲಿ ತಹಶೀಲ್ದಾರ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದು, ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಗ್ಯ ತಪಾಸಣೆಗೆ ಅಡಚಣೆ: ಚಿಟಗುಪ್ಪ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಆರೋಗ್ಯ ಸಿಬ್ಬಂದಿಗಳಿಗೆ ಜನರು ಸಹಕಾರ ನೀಡುತ್ತಿಲ್ಲ ಎಂಬ ಸಿಬ್ಬಂದಿಗಳ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಖುದ್ದಾಗಿ ಹಾಜರಿದ್ದು, ಆರೋಗ್ಯ ತಪಾಸಣೆ ನಡೆಸಲು ಮುಂದಾದ ಸಂದರ್ಭದಲ್ಲಿ ಈ ಹಲ್ಲೆ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Date: 29-06-2020  www.kknewsonline.in

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…