ಯಂತ್ರೋಪಕರಣಗಳ ಖರೀದಿಗೆ ಅರ್ಜಿ ಆಹ್ವಾನ
ಬೀದರ: 2019-20ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ಯಂತ್ರೋಪಕರಣಗಳ ಖರೀದಿಗೆ ಸಹಾಯದನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಕಾರ್ಯಕ್ರಮಡಿ ಅನುಮೋದಿತ ಕಂಪನಿಗಳಿಂದ ಖರೀಧಿಸಲಾದ ವಿವಿಧ ಯಂತ್ರೋಪಕರಣಗಳಾದ ಔಷಧಿ ಸಿಂಪರಣಾ ಯಂತ್ರ, ಕಳೆ ತೆಗೆಯುವ ಯಂತ್ರ ರೋಟೋವೆಟರ್, ಕಲ್ಟಿವೆಟರ್ ಹಾಗೂ ರೈತರಿಗೆ ತಮ್ಮ ತೋಟಗಳಲ್ಲಿ ಅನುಕೂಲವಾಗುವ ಯಂತ್ರಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಸಣ್ಣ, ಅತಿ ಸಣ್ಣ ಹಾಗೂ ಮಹಿಳಾ ರೈತರಿಗೆ ಶೇ.50 ಹಾಗೂ ಇತರೆ ವರ್ಗದ ರೈತರಿಗೆ ಶೇ.40ರಷ್ಟು ಸಹಾಯಧನದ ಸೌಲಭ್ಯವಿರುತ್ತದೆ.
ಆಸಕ್ತ ರೈತರು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಅಥವಾ ತಾಲೂಕು ತೋಟಗಾರಿಕೆ ಕಚೇರಿಯಿಂದ ಅರ್ಜಿ/ ಮಾಹಿತಿ ಪಡೆದು ನಿಗದಿತ ನಮೂನೆಯಲ್ಲಿ ರೈತರ ಪಹಣಿ, ಹೋಲ್ಡಿಂಗ್, ನೀರು ಬಳಕೆ ಪ್ರಮಾಣ ಪತ್ರ, ತಹಸೀಲ್ದಾರ್ ಕಚೇರಿಯಿಂದ ಪಡೆದ ಸಣ್ಣ ಹಿಡುವಳಿ ಪ್ರಮಾಣ ಪತ್ರ, ತೋಟಗಾರಿಕೆ ಬೆಳೆಗಳ ಗಣಕೀಕೃತ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್ ಜೇರಾಕ್ಸ್ ಪ್ರತಿಯೊಂದಿಗೆ ನ.20 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಹುಮನಾಬಾದ್ನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Date:07-11-2019
ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ
*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…

















