ರಾಜಶೇಖರ ಪಾಟೀಲ ಬೀದರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ.?.
ರಾಜಶೇಖರ ಪಾಟೀಲ ಬೀದರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ..?
ಹುಮನಾವಾದ: ಬೀದರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ರಾಜಶೇಖರ ಪಾಟೀಲ ಬಹುತೇಕ ಖಚಿತ ಎನ್ನಲಾಗುತ್ತಿದೆ.
ನಾಲ್ಕು ಬಾರಿ ಶಾಸಕರಾಗಿ ಸಚಿವರಾಗಿ ಕಾರ್ಯ ನಿರ್ವಹಿಸಿದ ರಾಜಶೇಖರ ಪಾಟೀಲ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸಲೇ ಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ ಕಾಂಗ್ರೆಸ್ ಪಕ್ಷದ ವರಿಷ್ಠರು ಒತ್ತಾಯಿಸುತ್ತಿರುವ ಬಗ್ಗೆ ಮಾಹಿತಿಗಳು ಲಭ್ಯವಾಗುತ್ತಿವೆ.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿ ಇದ್ದರೂ ಕೂಡ ಯಾವುದೇ ಸೂಕ್ತ ಸ್ಥಾನಮಾನ ಸಿಗದ ಕಾರಣ ಸಿಟ್ಟಾಗಿರುವ ಪಾಟೀಲರನ್ನು ಮನವಲಿಸಿ ಚುನಾವಣಾ ಅಖಾಡಕ್ಕೆ ಇಳಿಸುವ ತಯಾರಿ ನಡೆದಿದ್ದು, ಎರಡು ದಿನಗಳಲ್ಲಿ ಅಂತಿಮ ಅಭ್ಯರ್ಥಿಯ ಹೆಸರು ಘೋಷಣೆ ಆಗುವ ಸಾಧ್ಯತೆ ಇದೆ.
ಸಧ್ಯ ಬಿಜೆಪಿ ಪಕ್ಷದಿಂದ ಹಾಲಿ ಕೇಂದ್ರ ಸಚಿವ ಭಗವಂತ ಖೂಬಾಗೆ ಟಿಕೆಟ್ ದಕ್ಕಿದ್ದು, ಕಾಂಗ್ರೆಸ್ ಪಕ್ಷದಿಂದ ರಾಜಶೇಖರ ಪಾಟೀಲ ಅಖಾಡಕ್ಕೆ ಇಳಿದರೆ ಚುನಾವಣೆಯಲ್ಲಿ ಭಾರಿ ಪೈಪೋಟಿ ನಡೆಯುವ ಸಾಧ್ಯತೆ ಇದೆ. ಬಿಜೆಪಿ ಪಕ್ಷದಲ್ಲಿನ ಖೂಬಾ ವಿರೋಧಿಗಳು ಕೂಡ ರಾಜಶೇಖರ ಪಾಟೀಲ ಚುನಾವಣಾ ಅಖಾಡಕ್ಕೆ ಇಳಿಯಬೇಕು ಎಂದು ಒತ್ತಾಯಿಸುತ್ತಿದ್ದಾರೆಂದು ಮೂಲಗಳಿಂದ ತಿಳಿದು ಬರುತ್ತಿದ್ದು ಅಭ್ಯರ್ಥಿಯ ಘೋಷಣೆಯ ನಂತರ ಚುನಾವಣಾ ಕಾವು ಇರಲಿದೆ.
Date: 16-03-2024 : Time: 1:50pm : www.kknewsonline.in
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















