Home ನಿಮ್ಮ ಜಿಲ್ಲೆ ಬೀದರ ರೆಡ್ಡಿ ಸಮುದಾಯಕ್ಕೆ ನಿಗಮ ಮಂಡಳಿ ಸ್ಥಾಪನೆ ಮಾಡಿ.

ರೆಡ್ಡಿ ಸಮುದಾಯಕ್ಕೆ ನಿಗಮ ಮಂಡಳಿ ಸ್ಥಾಪನೆ ಮಾಡಿ.

ರೆಡ್ಡಿ ಸಮುದಾಯಕ್ಕೆ ನಿಗಮ ಮಂಡಳಿ ಸ್ಥಾಪನೆ ಮಾಡಿ.
ಹುಮನಾಬಾದ: ರೆಡ್ಡಿ ಸುಮುದಾಯದ ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗಾಗಿ ರೆಡ್ಡಿ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪಿಸಬೇಕು ಎಂದು ರೆಡ್ಡಿ ಸಮಾಜದ ಮುಖಂಡ ಬ್ಯಾಂಕ್ ರೆಡ್ೞಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಪಟ್ಟಣದ ಪ್ರವಾಸಿವಮಂದಿರದಲ್ಲಿ ಗುರುವಾರ ಏರ್ಪಡಿಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ್ದು, ರಾಜ್ಯ ಸರ್ಕಾರ ವಿವಿಧ ನಿಗಮ ಮಂಡಳಿಗಳ ಸ್ಥಾಪನೆ ಮಾಡುವ ಮೂಲಕ ಆಯಾ ಸಮುದಾಯಕ್ಕೆ ನ್ಯಾಯ ನೀಡುವ ಕೆಲಸ ಮುಖ್ಯಮಂತ್ರಿಗಳು ಶ್ರಮಿಸುತ್ತಿದ್ದು, 50 ಲಕ್ಷಕ್ಕೂ ಅಧಿಕ ಜನರು ಇರುವ ರೆಡ್ಡಿ ಸಮುದಾಯಕ್ಕೂ ನಿಗಮ ಮಂಡಳಿ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿದರು.
ಸಮಾಜ ಮುಖಂಡ ಮಾಣಿಕರೆಡ್ಡಿ ಇಸ್ಲಾಂಪೂರ್ ಮಾತನಾಡಿ, ರೆಡ್ಡಿ ಸಮಾಜಕ್ಕೆ ನಿಗಮ ಮಂಡಳಿ ಸ್ಥಾಪಿಸುವ ಜೊತೆಗೆ ರೆಡ್ಡಿ ಸಮುದಾಯದ ಜನರನ್ನು 2ಎ ಗೆ ಸೇರ್ಪಡೆ ಮಾಡಬೇಕು ಎಂದರು. ರಮೇಶ ರೆಡ್ಡಿ ಮಾತನಾಡಿ, ರೆಡ್ಡಿ ಸಮಾಜದಲ್ಲಿ ಎಲ್ಲರೂ ಶ್ರೀಮಂತರು ಇಲ್ಲ. ಕಡು ಬಡವರು ಕೂಡ ಇದ್ದಾರೆ. ನಿಗಮ ಸ್ಥಾಪುಸುವ ಮೂಲಕ ನ್ಯಾಯ ನೀಡುವ ಕೆಲಸ ರಾಜ್ಯ ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿದರು.
ಸಮಾಜ ಮುಖಂಡ ಶರಣರೆಡ್ಡಿ, ಧರ್ಮರೆಡ್ಡಿ ಸೇರಿದಂತೆ ಇತರರು ಇದ್ದರು.
Date: 24-12-2020 : www.kknewsonline.in

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…