Home ಸುದ್ದಿಗಳು ವಾಣಿಜ್ಯ ಸುದ್ದಿ ರೈತರ ಆದಾಯ ದ್ವಿಗುಣಗೊಳಿಸಲುವ ಗುರಿ- ಸಚಿವ ಚವ್ಹಾಣ್

ರೈತರ ಆದಾಯ ದ್ವಿಗುಣಗೊಳಿಸಲುವ ಗುರಿ- ಸಚಿವ ಚವ್ಹಾಣ್

ಬೀದರ-11/09/19: ಜಿಲ್ಲೆಯಲ್ಲಿನ ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಮತ್ತು ಹಾಲು ಉತ್ಪಾದನೆಯ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಹೆಚ್ಚು ಹಾಲು ಕೊಡುವ ಗಜರಾತ್‌ನ ಗಿರ್ ಎನ್ನುವ ೨೦,೦೦೦ ಗೋವುಗಳನ್ನು ಜಿಲ್ಲೆಯ ರೈತರಿಗೆ ಪೈರೈಸಲು ತಿರ್ಮಾನಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.

ನಗರದ ಕೃಷಿ ವಿಜ್ಞಾನ ಕೇಂದ್ರ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ಹಾಗೂ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಬುಧವಾರ ನಡೆದ ರಾಷ್ಟಿçÃಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಮತ್ತು ರಾಷ್ಟಿçÃಯ ಕೃತಕ ಗರ್ಭಧಾರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗಜರಾತ್‌ನ ಗಿರ್ ಎನ್ನುವ ಗೋವುಗಳನ್ನು ಜಿಲ್ಲೆಯ ರೈತರಿಗೆ ಪೈರೈಸಲು ಅಧಿಕಾರಿಗಳು ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ ಅವರು, ಗೋವುಗಳನ್ನು ಸಂರಕ್ಷಿಸಿ, ಪೋಷಿಸಿದಲ್ಲಿ ಹಾಲು ಉತ್ಪಾದನೆ ಹೆಚ್ಚಾಗಿ ಎಲ್ಲರ ಮನೆಯಲ್ಲಿಯೂ ಹಾಲು ಸಿಗಲಿದೆ. ರೈತರ ಆದಾಯ ಹೆಚ್ಚಳವಾಗುವುದರ ಜೊತೆಗೆ ಉದ್ಯೊÃಗ ಸೃಷ್ಠಿಗೆ ಸಹಕಾರಿಯಾಗಲಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಮಾಡುತ್ತಿರುವ ಕೆಲಸಗಳ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಮಾಡಲಾಗುವುದು ಎಂದು ಭರವಸೆ ನೀಡಿದರು.

ನನ್ನ ಅಭಿಲಾಶೆಯಂತೆಯೇ ಪಶು ಸಂಗೋಪನೆ ಇಲಾಖೆಯ ಸಚಿವ ಸ್ಥಾನವನ್ನು ಪಡೆದಿದ್ದೆÃನೆ. ಪಶು ಮತ್ತು ಗೋಮಾತೆಯ ರಕ್ಷಣೆಯ ಸದಾವಕಾಶ ದೊರೆತಿದ್ದು, ನನ್ನ ಕರ್ತವ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವೆ ಎಂದು ತಿಳಿಸಿದರು. ಪಶು ಸಂಗೋಪನೆ ಇಲಾಖೆಯು ಬಡವರು, ಹಾಲು ಉತ್ಪಾದನೆ ಮಾಡುವವರು, ರೈತರಿಗೆ ಸಂಬಂಧಿಸಿದ್ದಾಗಿರುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಉತ್ತಮವಾಗಿ ಕೆಲಸ ನಿರ್ವಹಿಸಬೇಕು. ಅವಧಿ ಮೀರಿದ ಔಷಧ ಪುರೈಕೆಯಾಗದಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿರುವ ಗೋಶಾಲೆಗಳಲ್ಲಿ ವ್ಯವಸ್ಥೆ ಸರಿಯಿಲ್ಲ ಎನ್ನುವ ದೂರುಗಳಿವೆ. ಅವುಗಳನ್ನು ಸರಿಪಡಿಸಿ ಇಲಾಖೆಯ ಕೆಲಸ ಕಾರ್ಯಗಳು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಕಾಲು ಬಾಯಿ ರೋಗ ನಿಯಂತ್ರಣಕ್ಕಾಗಿ ಸರ್ಕಾರವು ಉಚಿತವಾಗಿ ಲಸಿಕೆ ನೀಡಲು ಮುಂದಾಗಿದೆ. ೨೦೨೪ರ ವೇಳೆಗೆ ಈ ರೋಗಮುಕ್ತವಾಗಿಸಲು ಅಧಿಕಾರಿಗಳು ರೈತರ ಮನೆಗೆ ಬಂದು ಲಸಿಕೆ ನೀಡುವರು. ಸಾರ್ವಜನಿಕರು ಯೋಜನೆಯ ಸದುಪಯೋಗ ಪಡೆದು ಪಶು ಮತ್ತು ಗೋಮಾತೆಯನ್ನು ಸಂರಕ್ಷಿಸಲು ಮುಂದಾಗಬೇಕು ಎಂದು ತಿಳಿಸಿದ ಅವರು, ಪ್ಲಾಸ್ಟಿಕ್ ತ್ಯಾಜ್ಯವನ್ನು ಎಲ್ಲಂದರಲ್ಲಿ ಬೀಸಾಡುವುದರಿಂದ ಜಾನುವಾರಿಗಳು ತಿಂದು ಅನಾರೋಗ್ಯಕ್ಕೆ ಒಳಗಾಗುತ್ತವೆ. ಹಾಗಾಗಿ ಪ್ಲಾಸ್ಟಿಕ್ ಬಳಕೆಯನ್ನು ಸಾಧ್ಯವಾದಷ್ಟು ನಿಯಂತ್ರಿಸಬೇಕು. ಗೋವನ್ನು ಸಂರಕ್ಷಿಸುವ ಮನೆ ಸಮೃದ್ಧಿಯಿಂದ ಕೂಡಿರುತ್ತದೆ. ನಮ್ಮನ್ನು ಹಾಲು ಕೊಟ್ಟು ಪೋಷಿಸುವ ಗೋವುಗಳನ್ನು ಯಾವುದೇ ಕಾರಣಕ್ಕೂ ಕಸಾಯಿಖಾನೆಗೆ ಸಾಗಿಸಬಾರದು ಎಂದು ತಿಳಿಸಿದರು.

ಹಾಲಿನ ದರ ಹೆಚ್ಚಿಸಲು ಚಿಂತನೆ: ಪಶುಗಳನ್ನು ಸಾಕುವ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರದಲ್ಲಿ ಒಂದು ರೂ. ಹೆಚ್ಚಿಸುವ ಚಿಂತನೆಯಿದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದ ಸಚಿವರು, ಇಲಾಖೆಯಲ್ಲಿ ೮,೫೦೦ ಹುದ್ದೆಗಳು ಖಾಲಿ ಇದ್ದು, ಅವನ್ನು ಭರ್ತಿ ಮಾಡಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.

ರಾಯಚೂರು ಕೃಷಿ ವಿಜ್ಞಾನಗಳ ಮಹಾವಿದ್ಯಾಲಯದ ಕುಲಪತಿ ಡಾ| ಕೆ.ಎನ್ ಕಟ್ಟಿಮನಿ ಅಧ್ಯಕ್ಷತೆ ವಹಿಸಿದ್ದರು. ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ| ಗೌತಮ ಅರಳಿ ಪ್ರಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರಾದ ಉಪೇಂದ್ರ ಪ್ರತಾಪ ಸಿಂಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ,   ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ, ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ| ಹೆಚ್.ಡಿ.ನಾರಾಯಣ ಸ್ವಾಮಿ, ಕುಲಸಚಿವರಾದ ಡಾ| ಕೆ.ಸಿ.ವೀರಣ್ಣ, ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ| ಬಿ.ಎಮ್.ಚಿತ್ತಾಪುರ, ಬೀದರ್‌ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ, ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ| ಎನ್.ಎ ಪಾಟೀಲ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ವಿದ್ಯಾನಂದ.ಸಿ, ಕಲಬುರಗಿ, ಬೀದರ ಮತ್ತು ಯಾದಗಿರಿ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ| ಮನೋಹರ ಕುಲಕರ್ಣಿ, ಬೀದರ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ| ಸುನೀಲ್ ಕುಲಕರ್ಣಿ ಉಪಸ್ಥಿತರಿದ್ದರು.

Check Also

ಹುಮನಾಬಾದ – ಸಡಗರದ ವಿಜಯದಶಮಿ ಆಚರಣೆ

ಬೀದರ: ಹುಮನಾಬಾದ ತಾಲೂಕಿನ ಮಂಗಳವಾರ ವಿಜಯದಶಮಿ ಹಬ್ಬ ಸಡಗರ ಹಾಗೂ ಸಂಭ್ರಮದಿಂದ ಆಚರಣೆ ಮಾಡಲಾಯಿತು. ಪಟ್ಟಣದ …