Home ನಿಮ್ಮ ಜಿಲ್ಲೆ ಬೀದರ ಲಾಕ್‍ಡೌನ್ ಆದೇಶ ಉಲ್ಲಂಘನೆ: 213 ವಾಹನಗಳ ಜಪ್ತಿ

ಲಾಕ್‍ಡೌನ್ ಆದೇಶ ಉಲ್ಲಂಘನೆ: 213 ವಾಹನಗಳ ಜಪ್ತಿ

ಬೀದರಃ ಭಾರತದಲ್ಲಿ ಕೊರೊನಾ ವೈರಸ್ ಸೋಂಕು ತಡೆಯಲು ಪ್ರಧಾನಮಂತ್ರಿಗಳು ಮಾ.25 ರಿಂದ 21 ದಿನಗಳ ಕಾಲ ಲಾಕಡೌನ್ (ನಿಷೇಧ) ಆದೇಶಿಸಿದ್ದು, ಕೊರೊನಾ ವೈರಸ್ ಸೋಂಕು ಇತರರಿಗೆ ಹರಡದಂತೆ ತಡೆಯಲು ಹೋಮ್‍ಕ್ವಾರಂಟೈನ್ (ಗೃಹ ನಿರ್ಬಂಧ) ಮತ್ತು ಕಲಂ 144 ಸಿ.ಆರ್.ಪಿ.ಸಿ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಬೀದರ ಜಿಲ್ಲೆಯಲ್ಲಿ 4 ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮನೆಯಲ್ಲಿಯೇ ಇರತಕ್ಕದ್ದು. ಅತ್ಯವಶ್ಯಕ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಗೆ ಬರತಕ್ಕದ್ದು ಎಂದು ಆದೇಶವಿದ್ದರು ಸಹ ಅನವಶ್ಯಕವಾಗಿ ಸಂಚಾರಿಸಿದವರ 213 ವಾಹನಗಳನ್ನು ಜಪ್ತಿ ಮಾಡಿ ಕಾನೂನು ಪ್ರಕ್ರಿಯೆ ಜರುಗಿಸಲಾಗಿದೆ. ಇನ್ಮುಂದೆ ಸಾರ್ವಜನಿಕರು ಲಾಕ್‍ಡೌನ್ ಆದೇಶವನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿಗಳಾದ ಡಿ.ಎಲ್.ನಾಗೇಶ ಅವರು ತಿಳಿಸಿದ್ದಾರೆ.

 

Date: 31-03-2020  Time:9:15PM

Check Also

ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ

ಬೀದರ: ಬೀದರ‌ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …