ಲಿಂಗ ಪತ್ತೆ : ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳ ಮೇಲೆ ನಿಗಾ
ಅನಧಿಕೃತ ಖಾಸಗಿ ಆಸ್ಪತ್ರೆಗಳು ಮುಚ್ಚಿ
ಬೀದರ: ಜಿಲ್ಲಾಧಿಕಾರಿ ಡಾ| ಹೆಚ್.ಆರ್.ಮಹಾದೇವ್ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಅನುಷ್ಠಾನ ಕುರಿತಂತೆ ಸಭೆ ನಡೆಯಿತು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ಇಂದುಮತಿ ಪಾಟೀಲ್ ಅವರು ಜಿಲ್ಲೆಯಲ್ಲಿ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆಯ ಅನುಷ್ಠಾನ ಕುರಿತಂತೆ ಜಿಲ್ಲೆಯಲ್ಲಿ ಕೈಗೊಂಡಿರುವ ಕೆಲಸಗಳ ಬಗ್ಗೆ ಮಾಹಿತಿ ನೀಡಿದರು.
1ಕ್ಕಿಂತ ಹೆಚ್ಚು ಹೆಣ್ಣು ಮಕ್ಕಳನ್ನು ಹೊಂದಿರುವ ಗರ್ಭಿಣಿ ಮಹಿಳೆಯರನ್ನು ಸಂಪರ್ಕಿಸಿ ಕಾಯ್ದೆಯ ಬಗ್ಗೆ ತಿಳುವಳಿಕೆ ನೀಡಲಾಗುತ್ತಿದೆ. ಆಸ್ಪತ್ರೆಗಳು ಮತ್ತು ಸ್ಕಾö್ಯನಿಂಗ್ ಸೆಂಟರ್ಗಳಿAದ ಮಾಹಿತಿ ಪಡೆಯಲಾಗುತ್ತಿದೆ. ಕಾಯ್ದೆ ಉಲ್ಲಂಘಿಸಿದ ಸ್ಕಾö್ಯನಿಂಗ್ ಸೆಂಟರ್ಗಳನ್ನು ಮುಚ್ಚಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿರುವ ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳ ಮೇಲೆ ನಿಗಾ ವಹಿಸಬೇಕು. ಈ ಕೇಂದ್ರಗಳಿಗೆ ಆಗಾಗ ಭೇಟಿ ನೀಡಿ ಕಾಯ್ದೆ ಉಲ್ಲಂಘನೆಯಾಗದAತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಅರ್ಹತೆ ಇಲ್ಲದೇ ಅನಧಿಕೃತವಾಗಿ ನಡೆಸಲಾಗುತ್ತಿರುವ ಆಸ್ಪತ್ರೆಗಳನ್ನು ಮುಚ್ಚಿಸುವಂತೆ ತಿಳಿಸಲಾಗಿದೆ. ಇದಕ್ಕಾಗಿ ಈಗಾಗಲೇ ತಂಡಗಳನ್ನು ನಿಯೋಜಿಸಲಾಗಿದೆ. ಇವರು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ವಿ.ಜಿ.ರೆಡ್ಡಿ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ| ರತಿಕಾಂತ ಸ್ವಾಮಿ, ವೈದ್ಯಾಧಿಕಾರಿಗಳಾದ ಡಾ| ರಾಜಶೇಖರ ಪಾಟೀಲ್, ಡಾ.ಅನೀಲ ಚಿಂತಾಮಣಿ, ಡಾ| ಲಕ್ಷ್ಮಿಕಾಂತ, ಡಾ.ಗಾಯತ್ರಿ, ಡಾ.ದೇವಕಿ, ಡಾ| ಶಾಂತಲಿAಗ ಪಾಟೀಲ್ ಹಾಗೂ ಇತರರು ಉಪಸ್ಥಿತರಿದ್ದರು.
Date:13-11-2019
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















