Home ಅಂಕಣಗಳು ವಿದ್ಯಾರ್ಥಿಗಳಿಗೆ ಜಂತು ಹುಳು ನಿವಾರಣೆ ಮಾತ್ರೆ ವಿತರಣೆ

ವಿದ್ಯಾರ್ಥಿಗಳಿಗೆ ಜಂತು ಹುಳು ನಿವಾರಣೆ ಮಾತ್ರೆ ವಿತರಣೆ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಗರದ ಸಿದ್ಧಾರೂಢ ಮಠದಲ್ಲಿರುವ ಶಿವಕುಮಾರೇಶ್ವರ ಗುರುಕುಲ್ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ಕಾರ್ಯಕ್ರವನ್ನು ಆಚರಿಸಲಾಯಿತು.
ಜಿಲ್ಲಾ ಪಂಚಾಯತ್‌ನ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷೆ ಉಷಾ ರಾಜೇಂದ್ರ ನಿಟ್ಟೂರಕರ್ ಮಕ್ಕಳಿಗೆ ಮಾತ್ರೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಹೆಚ್ಚಿನ ರೋಗಗಳು ಅಶುಚಿತ್ವದ ಕಾರಣದಿಂದಾಗಿ ಹುಟ್ಟಿಕೊಳ್ಳುತ್ತವೆ. ಹಾಗಾಗಿ ಮಕ್ಕಳು ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು. ಆರೋಗ್ಯವೇ ಭಾಗ್ಯ ಎನ್ನುವಂತೆ ಉತ್ತಮ ಆರೋಗ್ಯ ಹೊಂದಿದಲ್ಲಿ ಮಾತ್ರ ಚಟುವಟಿಕೆಯಿಂದ ಇರಲು ಸಾಧ್ಯ. ಆರೋಗ್ಯದ ಕುರಿತು ಎಂದಿಗೂ ನಿರ್ಲಕ್ಷö್ಯ ವಹಿಸದಿರಿ ಎಂದ ಅವರು, ಜಂತು ಹುಳು ರೋಗ ನಿವಾರಣೆಗಾಗಿ ಕೊಡಲಾಗುತ್ತಿರುವ ಅಲ್ಬೆಂಡಜೋಲ್ ಮಾತ್ರೆಗಳನ್ನು ಮಕ್ಕಳೆಲ್ಲರೂ ತಪ್ಪದೇ ಸೇವಿಸಬೇಕು ಎಂದು ಹೇಳಿದರು.
ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ| ರವೀಂದ್ರ ಸಿರಸಗೆ ಮಾತನಾಡಿ, ಜಂತು ಹುಳು ರೋಗ ನಿಯಂತ್ರಿಸುವ ನಿಟ್ಟಿನಲ್ಲಿ ೧ರಿಂದ ೧೯ ವರ್ಷದೊಳಗಿನ ಮಕ್ಕಳಿಗೆ ಮಾತ್ರೆಗಳನ್ನು ನೀಡುವ ಕಾರ್ಯಕ್ರಮ ಇದಾಗಿದೆ. ಆರೋಗ್ಯ ಸಿಬ್ಬಂದಿ ಕೊಡುವ ಅಲ್ಬೆಂಡಜೋಲ್ ಮಾತ್ರೆಯನ್ನು ೨ ವರ್ಷದೊಳಗಿನ ಮಕ್ಕಳು ಅರ್ಧ ಮತ್ತು ೨ರಿಂದ ೧೯ ವರ್ಷದವರು ಒಂದು ಮಾತ್ರೆಯನ್ನು ಸೇವಿಸಬೇಕು ಎಂದು ತಿಳಿಸಿದರು. ಶಿಕ್ಷಣ ಇಲಾಖೆಯ ಅಧಿಕಾರಿ ಇನಾಯತ್ ಅಲಿ ಸಿಂದೆ ಅವರು ಕಾರ್ಯಕ್ರಮದ ಬಗ್ಗೆ ವಿವರಣೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ| ರಾಜಶೇಖರ ಪಾಟೀಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಕೃಷ್ಣ ರೆಡ್ಡಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ಇಂದುಮತಿ ಪಾಟೀಲ್, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ| ದೀಪಾ ಕೊಂಡಾ, ಜಿಲ್ಲಾ ಲಸಿಕಾ ಕಾರ್ಯಕ್ರಮ ಸಂಯೋಜಕರಾದ ಶಿವಶಂಕರ, ತಾಲೂಕು ಆರೋಗ್ಯ ಅಧಿಕಾರಿ ಡಾ.ಶಿವಕುಮಾರ, ಇಂದಿರಾಬಾಯಿ ಗುರುತಪ್ಪಾ ಶೆಟ್‌ಕಾರ್ ಪ್ರೌಢ ಶಾಲೆಯ ಮುಖ್ಯಗುರು ಲಕ್ಷö್ಮಣ ಪೂಜಾರಿ, ಪ್ರಾಥಮಿಕ ಶಾಲೆಯ ಮುಖ್ಯಗುರು ಗೋಪಾಲರೆಡ್ಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುಭಾಷ ಮುಧಾಳೆ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರಾವಣ ಜಾಧವ, ಕುಂಬರವಾಡ ವೈದ್ಯಾಧಿಕಾರಿ ಡಾ.ಸುನೀಲ ಪಾಟೀಲ್, ಶಿಕ್ಷಣ ಇಲಾಖೆಯ ಗೀತಾ ರೆಡ್ಡಿ ಹಾಗೂ ಇತರರು ಉಪಸ್ಥಿತರಿದ್ದರು.

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…