Home ನಿಮ್ಮ ಜಿಲ್ಲೆ ಬೀದರ ಶಾಲಾ ಪ್ರವೇಶ ಶುಲ್ಕದಲ್ಲಿ ವಿನಾಯ್ತಿ ನೀಡಿ: ಸಚಿವ ಚವ್ಹಾಣ್ ಮನವಿ. 

ಶಾಲಾ ಪ್ರವೇಶ ಶುಲ್ಕದಲ್ಲಿ ವಿನಾಯ್ತಿ ನೀಡಿ: ಸಚಿವ ಚವ್ಹಾಣ್ ಮನವಿ. 

ಶಾಲಾ ಪ್ರವೇಶ ಶುಲ್ಕದಲ್ಲಿ ವಿನಾಯ್ತಿ ನೀಡಿ: ಸಚಿವ ಚವ್ಹಾಣ್ ಮನವಿ. 

ಬೀದರ: ಪ್ರಸಕ್ತ ವರ್ಷ ಕೋರೋನಾ ಹಿನ್ನೆಲೆಯಲ್ಲಿ ಮಕ್ಕಳಿಗೆ ಶಾಲಾ ಪ್ರವೇಶ ಶುಲ್ಕದಲ್ಲಿ ವಿನಾಯ್ತಿ ನೀಡಬೇಕು. ಮಾನವೀಯತೆ ದೃಷ್ಟಿಯಿಂದಾಗಿ ಬಡ ಮಕ್ಕಳಿಗೆ ಶುಲ್ಕ ಕೈಬಿಡಬೇಕು ಎಂದು ಪಶು ಸಂಗೋಪನೆ, ಹಜ್ ಮತ್ತು ವಕ್ಫ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ ಮನವಿ ಮಾಡಿದರು.
ಜೂನ್ 19 ರಂದು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಈ ವರ್ಷ ಯಾವುದೇ ಮಕ್ಕಳಿಂದ ಡೊನೇಶನ್ ತೆಗೆದುಕೊಳ್ಳಬಾರದು ಎಂದರು.
ದೇಶದಲ್ಲಿ ಕರೋನಾ ಮಹಾಮಾರಿ ರೋಗದಿಂದ ಬಹಳಷ್ಟು ಜನರು ತೊಂದರೆಗೀಡಾಗಿದ್ದಾರೆ. ಆರ್ಥಿಕ ತೊಂದರೆಯಿಂದಾಗಿ ಬಹಳಷ್ಟು ಮಕ್ಕಳ ಪಾಲಕರು ತಮ್ಮ ಮಕ್ಕಳನ್ನು ಶುಲ್ಕ ಕಟ್ಟಿ ಶಾಲೆಗೆ ಸೇರಿಸುವುದು ಹೇಗೆ ಎನ್ನುವ ಚಿಂತೆಯಲ್ಲಿದ್ದಾರೆ. ಇದನ್ನರಿಯಬೇಕು. ಎಲ್ಲಾ ಮಕ್ಕಳಿಗೂ ಶುಲ್ಕದಲ್ಲಿ ವಿನಾಯಿತಿ ನೀಡಬೇಕು. ಯಾರಿಗೆ ಶುಲ್ಕ ಕಟ್ಟಲು ಆಗುವುದಿಲ್ಲವೋ ಅಂತವರಿಂದ ಶುಲ್ಕ ತೆಗೆದುಕೊಳ್ಳಬೇಡಿರಿ ಎಂದು ಸಚಿವರು ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಲ್ಲಿ ಮನವಿ ಮಾಡಿದರು.
ಖಾಸಗಿ ಶಿಕ್ಷಣ ಸಂಸ್ಥೆಗಳ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಬಸವರಾಜ ಬರಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿರುವ ಶಿಕ್ಷಣ ಸಂಸ್ಥೆಗಳು ಆರ್ಥಿಕ ಸಂಕಷ್ಟದಲ್ಲಿವೆ. ಆದರೂ ತಮ್ಮ ಮನವಿಯಂತೆ ಪೋಷಕರಿಗೆ ಯಾವುದೇ ತೊಂದರೆಯಾಗದ ಹಾಗೆ ಮಕ್ಕಳಿಗೆ ಪ್ರವೇಶ ನೀಡಲಾಗುವುದು ಎಂದು ಸಚಿವರಿಗೆ ಭರವಸೆ ನೀಡಿದರು.
ಸಾಧ್ಯವಾದರೆ ಇನ್ನೊಮ್ಮೆ ಈ ಸಭೆ ನಡೆಸಿ ಆ ಸಭೆಗೆ ಜಿಲ್ಲೆಯಲ್ಲಿನ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರಮುಖರನ್ನು ಕರೆಯಿಸಿ ಶಾಲಾ ಪ್ರವೇಶ ಶುಲ್ಕದಲ್ಲಿ ವಿನಾಯಿತಿ ನೀಡಲು ತಿಳಿಸಬೇಕು ಎಂದು ಇದೆ ವೇಳೆ ವಿಜಯಕುಮಾರ ಸೋನಾರೆ ಅವರು ಸಭೆಗೆ ಸಲಹೆ ಮಾಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್, ಜಿಲ್ಲಾ ಪಂಚಾಯತಿ ಸಿಇಓ ಗ್ಯಾನೇಂದ್ರಕುಮಾರ ಗಂಗಾವಾರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಚ್.ಸಿ.ಚಂದ್ರಶೇಖರ, ಖಾಸಗಿ ಜಿಲ್ಲಾ ಒಕ್ಕೂಟಗಳ ಗೌರವ ಅಧ್ಯಕ್ಷರಾದ ರೇವಣಸಿದ್ದಪ್ಪ ಜಲಾದೆ, ಖಾಸಗಿ ಶಾಲೆ ಆಡಳಿತ ಮಂಡಳಿ ಸದಸ್ಯರು ಮುಖ್ಯಸ್ಥರು ಉಪಸ್ಥಿತರಿದ್ದರು.

 

Date:19-06-2020 www.kknewsonline.in

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…