Home ಸುದ್ದಿಗಳು ರಾಜ್ಯ ಸುದ್ದಿ ಶಾಲೆಗಳ ಆಸ್ತಿ ಶಾಲೆಗಳ ಹೆಸರಿಗೆ-ಸಚಿವ ಸುರೇಶ್ ಕುಮಾರ್

ಶಾಲೆಗಳ ಆಸ್ತಿ ಶಾಲೆಗಳ ಹೆಸರಿಗೆ-ಸಚಿವ ಸುರೇಶ್ ಕುಮಾರ್

ಶಿವಮೊಗ್ಗ: ಸರಕಾರಿ ಶಾಲೆಗಳ ಆಸ್ತಿಪಾಸ್ತಿಗಳನ್ನು ಆಯಾ ಶಾಲೆಗಳ ಹೆಸರಿಗೆ ನೋಂದಣಿ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕೆ. ಸುರೇಶ್ ಕುಮಾರ್ ತಿಳಿಸಿದರು.

ಶನಿವಾರ ಸಾಗರ ತಾಲೂಕಿನ ಚದರವಳ್ಳಿ ಗ್ರಾಮದಲ್ಲಿ  ಸರಕಾರಿ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಖಾಸಗಿ ಶಾಲೆಗಳ ಆಕರ್ಷಣೆ ಕಡಿಮೆ ಮಾಡಿ ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವಂತಹ ವಾತಾವರಣ ಸೃಷ್ಟಿಸುವ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಶಾಲೆಗಳ ದುರಸ್ತಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಇದಕ್ಕಾಗಿ ರಾಜ್ಯದಲ್ಲಿ  530 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಗೆ 34.48 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ. ಸಾಗರ ತಾಲೂಕಿನಲ್ಲಿ  134 ಶಾಲಾ ಕೊಠಡಿಗಳ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ‌ ಅಗತ್ಯ ಬಿದ್ದರೆ ಜಿಲ್ಲೆಗೆ ಹೆಚ್ಚುವರಿ ಅನುದೆನ ಒದಗಿಸಲಾಗುವುದು. ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸವನ್ನು ಸೆಪ್ಟಂಬರ್ ನಿಂದ ನವೆಂಬರ್ ಒಳಗಾಗಿ ಆಯೋಜಿಸಲು ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಶಾಸಕ ಹರತಾಳು ಹಾಲಪ್ಪ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ರಾಘವೇಂದ್ರ ಸ್ವಾಮೀಜಿ ಮತ್ತಿತರರು ಉಪಸ್ಥಿತರಿದ್ದರು.

 

Date: 28-12-2019 Time:4:15PM

Check Also

ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ

*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…