ಶಿಕ್ಷಕರಿಗೆ ಬಡ್ತಿ ನೀಡಲು ತಾತ್ಕಾಲಿಕ ಅರ್ಹತಾ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಶಿಕ್ಷಕರಿಗೆ ಬಡ್ತಿ ನೀಡಲು ತಾತ್ಕಾಲಿಕ ಅರ್ಹತಾ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
ಕಲಬುರಗಿ: ಕಲಬುರಗಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಇಡಿ./ಬಿ.ಪಿ.ಇಡಿ. ತರಬೇತಿ ಹೊಂದಿದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢ ಶಾಲಾ ಸಹಶಿಕ್ಷಕರು ಗ್ರೇಡ್-2 ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಹುದ್ದೆಗೆ ಬಡ್ತಿ ನೀಡಲು 1:1 ಅನುಪಾತದ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ಕಲಬುರಗಿ ಸಾರ್ವಜನಿಕ ಶಿಕ್ಷಣ ಕಚೇರಿಯ ddpikalaburagi.in/seniority.aspx ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ ಎಂದು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ತಿಳಿಸಿದ್ದಾರೆ.
ಸಂಬಂಧಪಟ್ಟ ಶಿಕ್ಷಕರು ಈ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ಗಮನಿಸಬೇಕು. ಈ ಪಟ್ಟಿ ಕುರಿತು ಏನಾದರು ಆಕ್ಷೇಪಣೆಗಳು ಇದ್ದಲ್ಲಿ 2020ರ ಆಗಸ್ಟ್ 20 ರೊಳಗಾಗಿ ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಖುದ್ದಾಗಿ ಹಾಜರಾಗಿ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬೇಕು.
ತದನಂತರ ಸಲ್ಲಿಸಲಾದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್‍ನಲ್ಲಿ ಪ್ರಕಟಿಸಿದ ವಿವರವಾದ ಅಧಿಸೂಚನೆಯನ್ನು ಗಮನಿಸಬೇಕೆಂದು ಅವರು ತಿಳಿಸಿದ್ದಾರೆ.
![]()
Date: 14-08-2020 www.kknewsonline.in
ಜೂ.15 ರಂದು ಸಮಾಜ ಕಲ್ಯಾಣ ಸಚಿವ* *ಡಾ.ಹೆಚ್.ಸಿ.ಮಹಾದೇವಪ್ಪ ಅವರ ಬೀದರ ಜಿಲ್ಲಾ ಪ್ರವಾಸ
ಬೀದರ, ಜೂನ್.12: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು …

















