ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು ಶಾಸಕ ಬಿ.ನಾರಾಯಣರಾವ್ ಅಂತ್ಯಸಂಸ್ಕಾರ.
ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು ಶಾಸಕ ಬಿ.ನಾರಾಯಣರಾವ್ ಅಂತ್ಯಸಂಸ್ಕಾರ.
ಬೀದರ: ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಸೋಂಕು ಹಾಗೂ ಅಂಗಾಗ ವೈಫಲ್ಯ ಕಾರಣದಿಂದ ಸಾವನ್ನಪ್ಪಿದ ಬಸವಕಲ್ಯಾಣ ಕ್ಷೇತ್ರದ ಶಾಸಕ ಬಿ.ನಾರಾಯಣರಾವ್ ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಗರದ ಅಬಿಗರಚೌಡಯ್ಯಾ ಆಶ್ರಮದ ಆವರಣದಲ್ಲಿ ಅಂತ್ಯಕ್ರಿಯೆ ನೆರೆವೇರಿಸಲಾಯಿತು.
ಅಂತ್ಯ ಸಂಸ್ಕಾರದಲ್ಲಿ ಕುಟುಂಬಸ್ಥರು ಸೇರಿ ಜಿಲ್ಲೆಯ ರಾಜಕೀಯ ಮುಖಂಡರು, ಅಧಿಕಾರಿಗಳು ಹಾಗೂ ಆಪ್ತರು ಭಾಗಿಯಾಗಿದರು.
ನಿನ್ನೆ ರಾತ್ರೆ ಬೆಂಗಳೂರಿನಿಂದ ಪ್ರಾರ್ಥೀವ ಶರೀರವನ್ನು ತೆಗೆದುಕೊಂಡು ಶುಕ್ರವಾರ ಬೆಳಿಗ್ಗೆ ಕಲ್ಯಾಣಕ್ಕೆ ತರಲಾಯಿತು. ನಂತರ ಕೋವಿಡ್ ನಿಯಮಗಳಂತೆ ಮುನ್ನೆಚ್ಚರಿಕೆ ವಹಿಸಿ ಅಂತ್ಯಕ್ರಿಯೆ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ಯು.ಟಿ ಖಾದರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಶಾಸಕ ರಾಜಶೇಖರ ಪಾಟೀಲ, ಬಂಡೆಪ್ಪಾ ಖಾಶೆಂಪೂರ್, ವಿಜಯಸಿಂಗ್, ಡಾ| ಚಂದ್ರಶೇಖರ ಪಾಟೀಲ, ಸಂಸದ ಉಮೇಶ ಜಾಧವ, ಭಗವಂತ ಖೂಬಾ, ಜಿಲ್ಲಾಧಿಕಾರಿ ರಾಮಚಂದ್ರನ್ , ಎಸ್ಪಿ ನಾಗೇಶ ಡಿ.ಎಲ್ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು.
Date: 25-09-2020
ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ
*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…

















