ಸಚಿವ ಚವ್ಹಾಣ್ 10 ದಿನ ಹೋಂ ಕ್ವಾರಂಟೈನ್
ಸಚಿವ ಚವ್ಹಾಣ್ 10 ದಿನ ಹೋಂ ಕ್ವಾರಂಟೈನ್ – ಲಾಕ್ ಡೌನ್ ಕಟ್ಟುನಿಟ್ಟಿನ ಜಾರಿಗೆ ಸಚಿವರ ಸೂಚನೆ.
ಬೀದರ: ವೈದ್ಯರ ಸಲಹೆ ಮೇರೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಹತ್ತು ದಿನ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದು, ಸಾರ್ವಜನಿಕರು ಯಾರೂ ಸಚಿವರ ಭೇಟಿಗೆ ಅವಕಾಶ ಇಲ್ಲ. ತುರ್ತು ಕೆಲಸವಿದ್ದರೆ ಮೊಬೈಲ್ ಮೂಲಕ ಸಂಪರ್ಕಿಸಬೇಕು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಶಿವಕುಮಾರ ಕಟ್ಟೆ ತಿಳಿಸಿದ್ದಾರೆ.
ಪ್ರಕಟಣೆಯ ಮೂಲಕ ಮಾಹಿತಿ ನೀಡಿದ ಅವರು, ತುರ್ತು ಕೆಲಸ ಇದ್ದರೆ ನಗರದ ಸಚಿವರ ಕಚೇರಿಯ ಆಪ್ತ ಸಹಾಯಕರ ಮೊಬೈಲ್ ಸಂಖ್ಯೆ 9980218156 / 9901108283ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ. ಅಲ್ಲದೆ, ಕರೊನಾ ಸೋಂಕು ಹರಡುವಿಕೆಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಒಂದು ವಾರದ ಲಾಕ್ ಡೌನ್ ಯಶಸ್ವಿಗೊಳಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲು ಸಚಿವ ಪ್ರಭು ಚವ್ಹಾಣ್ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ಅವರಿಗೆ ಸೂಚನೆ ನೀಡಿದ್ದಾರೆ.
ವಿವಿಧೆಡೆ ಸತತವಾಗಿ ಸಂಚರಿಸಿರುವ ಕಾರಣದಿಂದಾಗಿ ವೈದ್ಯರ ಸಲಹೆಯ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ಹತ್ತು ದಿನ ಕ್ವಾರಂಟೈನ್ ನಲ್ಲಿ ಇರುವ ಸಚಿವರು, ದೂರವಾಣಿ ಮೂಲಕ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಂಪರ್ಕಿಸಿ ಲಾಕ್ ಡೌನ್ ಕುರಿತಂತೆ ಮಾಹಿತಿ ಪಡೆದರು. ಲಾಕ್ ಡೌನ್ ಕಟ್ಟುನಿಟ್ಟಿನ ಜಾರಿ ಸಂಬಂಧಿಸಿದಂತೆ ಸೂಕ್ತ ನಿರ್ದೇಶನಗಳನ್ನು ನೀಡಿದರು. ಲಾಕ್ ಡೌನ್ ನಿಯಮಗಳನ್ನು ಯಾರಾದರೂ ಉಲ್ಲಂಘನೆ ಮಾಡುವವರ ಮೇಲೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲು ಸಹ ಸೂಚನೆ ನೀಡಿದ್ದಾರೆ.
ಮಹಾರಾಷ್ಟ್ರ ಹಾಗೂ ತೆಲಂಗಾಣದ ಗಡಿಯಲ್ಲಿರುವ ಜಿಲ್ಲೆಯಲ್ಲಿ ಬರುವ ದಿನಗಳಲ್ಲಿ ಸೋಂಕು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಹೀಗಾಗಿ ಜನರ ಜೀವ ಹಿತದೃಷ್ಟಿಯಿಂದ ಲಾಕ್ ಡೌನ್ ಯಶಸ್ವಿಯಾಗಬೇಕಿದೆ. ಪ್ರತಿಯೊಬ್ಬರೂ ನಿಯಮಗಳು ಕಡ್ಡಾಯವಾಗಿ ಪಾಲಿಸಿ ವೈರಸ್ ವಿರುದ್ಧ ಜಯ ಸಾಧಿಸುವ ಅಭಿಯಾನಕ್ಕೆ ಕೈಜೋಡಿಸಬೇಕು. ಜನರು ಎಲ್ಲ ನಿಯಮಗಳನ್ನು ಅಳವಡಿಸಿಕೊಂಡಾಗ ಕರೊನಾಗೆ ಕಟ್ಟಿಹಾಕುವುದು ಸುಲಭ ಎಂದು ಸಚಿವರು ಮನವಿ ಮಾಡಿದ್ದಾರೆ.
Date: 16-07-2020 www.kknewsonine.in
ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ
*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…
















