Home ನಿಮ್ಮ ಜಿಲ್ಲೆ ಬೀದರ ಸರ್ಕಾರದ ವಿರುದ್ಧ ಶಾಸಕ ಪಾಟೀಲ ಆಕ್ರೋಶ

ಸರ್ಕಾರದ ವಿರುದ್ಧ ಶಾಸಕ ಪಾಟೀಲ ಆಕ್ರೋಶ

ವರದಿ ಬರುವ ಮುನ್ನ ಮನೆಗೆ ಯಾಕೆ? ಶಾಸಕ ಪಾಟೀಲ ಪ್ರಶ್ನೆ

ಬೀದರ: ನೆರೆ ರಾಜ್ಯಗಳಿಂದ ಬಂದಿರುವ ಜನರನ್ನು ಸರ್ಕಾರಿ ಕ್ವಾರಂಟೈನ್ ನಲ್ಲಿ ಉಳಿದಿರುವ ಸಂದರ್ಭದಲ್ಲಿ ಅವರ ವರದಿ ಬರುವ ಮುನ್ನವೇ ಮನೆಗೆ ಕಳುಹಿಸಿರುವ ರಾಜ್ಯ ಸರ್ಕಾರದ ಹಾಗೂ ಜಿಲ್ಲಾಡಳಿತದ ನಡೆ ಸರಿಯಲ್ಲ ಎಂದು ಶಾಸಕ ರಾಜಶೇಖರ ಪಾಟೀಲ ಸರ್ಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಮನಾಬಾದ ಪಟ್ಟಣದ ಕೃಷಿ ಇಲಾಖೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ವಾರಂಟೈನ್ ಕೇಂದ್ರದಿಂದ ಮನೆಗೆ ತೆರಳಿದ ಎರೆಡು ದಿನಕ್ಕೆ ಪಾಸಿಟಿವ್ ವರದಿ ಬಂದಿದೆ . ಆ ಎರೆಡು ದಿನಗಳ ಕಾಲ ಅವರು ಎಲ್ಲೆಲ್ಲಿ ಸಂಚಾರ ಮಾಡಿದ್ದಾರೆ ಗೊತ್ತಾಗಲ್ಲ. ಮಾದರಿ ಪಡೆದವರ ವರದಿ ಬರುವ ವರೆಗೆ ಕ್ವಾರಂಟೈನ್ ಮಾಡಬೇಕಿತ್ತು ಎಂದು ಹೇಳಿದ ಅವರು ಸರ್ಕಾರ ತೆಗೆದುಕೊಂಡ ನಿರ್ಧಾರದ ವಿರುದ್ಧ ಬೇಸರ ವ್ಯಕ್ತಪಡಿಸಿದರು.

ಹುಮನಾಬಾದ ಮತ ಕ್ಷೇತ್ರದ ವಿವಿಧೆಡೆ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಎಲ್ಲಾ ಕಡೆಗಳಲ್ಲಿ ಭೇಟಿನೀಡಿ ಅಲ್ಲಿನ ಸ್ಥಿತಿ ಗತಿ ಪರಿಶೀಲನೆ ಮಾಡುವೆ ಎಂದು ತಿಳಿಸಿದರು.

 

Date: 01-06-2020

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…