ಸರ್ಕಾರಿ ಬಸ್ ಪಲ್ಟಿ – 15ಕ್ಕೂ ಅಧಿಕ ಜನರಿಗೆ ಗಾಯ
ಸರ್ಕಾರಿ ಬಸ್ ಪಲ್ಟಿ – 15ಕ್ಕೂ ಅಧಿಕ ಜನರಿಗೆ ಗಾಯ.
ಹುಮನಾವಾದ: ಬೀದರ್ ದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ತಾಲೂಕಿನ ದುಬಲಗುಂಡಿ ಕ್ರಾಸ್ ಹತ್ತಿರ ಭಾನುವಾರ ಸಂಜೆ ಉರುಳಿಬಿದ್ದ ಘಟನೆ ಸಂಭವಿಸಿದೆ.
ದುಬಲಗುಂಡಿ ಕ್ರಾಸ್ ಹತ್ತಿರ ನಾಲ್ಕು ಚಕ್ರ ವಾಹನವೊಂದು ಬಂದಿದ್ದು ಅಪಘಾತ ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರಿ ಬಸ್ ಚಾಲಕ ಬ್ರೇಕ್ ಹಾಕಿದ ಪರಿಣಾಮ ಬಸ್ ಪಲ್ಟಿ ಹೊಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಸ್ಸಿನಲ್ಲಿ 27 ಜನ ಪ್ರಯಾಣಿಕರಿದ್ದು, 15ಕ್ಕೂ ಅಧಿಕ ಜನರಿಗೆ ಸಣ್ಣ ಪುಟ್ಟ ಗಾಯಗಳು ಸಂಭವಿಸಿವೆ. ಅಪಘಾತದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಶಾಸಕ ರಾಜಶೇಖರ ಪಾಟೀಲ್ ಭೇಟಿ ನೀಡಿ ಗಾಯಾಳುಗಳನ್ನು ಬೀದರ್, ಹುಮನಾಬಾದ ಹಾಗೂ ಹಳ್ಳಿಖೇಡ ಬಿ ಸರ್ಕಾರಿ ಆಸ್ಪತ್ರೆಗಳಿಗೆ ರವಾನಿಸುವಲ್ಲಿ ಸಹಕರಿಸಿದರು.
ಪಿಎಸ್ಐ ರವಿಕುಮಾರ, ಸಂಚಾರ ಠಾಣೆಯ ಪಿಎಸ್ಐ ಬಸವರಾಜ ಸ್ಥಳದಲ್ಲಿದ್ದರು. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Date:15-11-2020
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















