Home ನಿಮ್ಮ ಜಿಲ್ಲೆ ಬೀದರ ಸ್ಥಳದಲ್ಲೇ 20 ಅರ್ಜಿಗಳಿಗೆ ಪರಿಹಾರ ಕಲ್ಪಿಸಿದ ಎಸಿ..

ಸ್ಥಳದಲ್ಲೇ 20 ಅರ್ಜಿಗಳಿಗೆ ಪರಿಹಾರ ಕಲ್ಪಿಸಿದ ಎಸಿ..

ಬೀದರ: ಬೀದರ ಸಹಾಯಕ ಆಯುಕ್ತರಾದ ಅಕ್ಷಯ ಶ್ರೀಧರ್ ಅವರು ಜ.8ರಂದು ಠಾಣಾಕುಶನೂರ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಅರ್ಜಿಗಳ ಪರಿಹಾರ ಕಲ್ಪಿಸುವ ಕೆಲಸ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಒಟ್ಟು 27 ಅರ್ಜಿಗಳನ್ನು ಸ್ವೀಕರಿಸಲಾಯಿತು. ಇದರಲ್ಲಿ ಪಿಂಚಣಿಗೆ ಸಂಬAಧಿಸಿದAತೆ ಸ್ವೀಕರಿಸಲಾದ 20 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲಾಯಿತು. ಮರಣ ಪ್ರಮಾಣ ಪತ್ರ ಜಾರಿ ಆಗುತ್ತಿಲ್ಲ ಎಂದು ವ್ಯಕ್ತಿಯೊಬ್ಬರು ಅಳಲು ತೋಡಿಕೊಂಡಾಗ, ಕೂಡಲೇ ನೋಂದಣಿಯಾದ ಮರಣ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಠಾಣಾ ಕುಶನೂರ ಗ್ರಾಮದಲ್ಲಿ ಕೃಷಿ ಇಲಾಖೆ ಕಚೇರಿಯ ಕಟ್ಟಡವನ್ನು ನಿರ್ಮಿಸಿಕೊಡುವಂತೆ ಗ್ರಾಮಸ್ಥರು ಮನವಿ ಸಲ್ಲಿಸಿದರು. ಸರ್ಕಾರಿ ಭೂಮಿ ಲಭ್ಯತೆ ಬಗ್ಗೆ ಕೂಡಲೆ ಪರಿಶೀಲಿಸಿ ನಿಯಮಾನುಸಾರ ಪ್ರಸ್ತಾವನೆ ಸಲ್ಲಿಸುವಂತೆ ಕಮಲನಗರ ತಹಸೀಲ್ದಾರರಿಗೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಠಾಣಾಕುಶನೂರ ಹಾಗೂ ಸುತ್ತಲಿನ ಗ್ರಾಮಸ್ಥರು ನಾನಾ ಅಹವಾಲುಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಮಲನಗರ ತಹಸೀಲ್ದಾರರಾದ ರಮೇಶ ಪೆದ್ದೆ, ಔರಾದ್ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್, ಉಪ ತಹಸೀಲ್ದಾರರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

 

Date: 08-01-2020 Time:6:15PM

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…