Home ನಿಮ್ಮ ಜಿಲ್ಲೆ ಬೀದರ ಹುಮನಾಬಾದ : ವ್ಯಕ್ತಿಯೊಬ್ಬನ ಮೃತದೇಹ ಪತ್ತೆ.

ಹುಮನಾಬಾದ : ವ್ಯಕ್ತಿಯೊಬ್ಬನ ಮೃತದೇಹ ಪತ್ತೆ.

ಹುಮನಾಬಾದ : ವ್ಯಕ್ತಿಯೊಬ್ಬನ ಮೃತದೇಹ ಪತ್ತೆ.
ಹುಮನಾಬಾದ: ಪಟ್ಟಣದ ಅಗ್ನಿಕುಂಡದ ಹಿಂದಿನ ಕಾಂಪ್ಲೆಕ್ಸ್ ನಲ್ಲಿ ಭಾನುವಾರ ಬೆಳಿಗ್ಗೆ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದೆ.
ಮಾಡಗಿ ಮೂಲದ ಘಾಳೆಪ್ಪೆ (30) ಮೃತಪಟ್ಟ ವ್ಯಕ್ತಿ ಎಂದು ಪೊಲೀಸರು ಗುರುತಿಸಿದ್ದು, ಯಾವ ಕಾರಣಕ್ಕೆ ವ್ಯಕ್ತಿ ಮೃತಪಟ್ಟಿದ್ದಾನೆ ಎಂಬ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ. ಕುಡಿದ ನಶೆಯಲ್ಲಿ ಬಿದ್ದು ಮೃತಪಟ್ಟಿದ್ದಾನೆಯೇ ಅಥವಾ ಕೊಲೆ ನಡೆದಿದೆ ಎಂದು ಎರಡು ಮಾರ್ಗದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದು, ಪೊಲೀಸರ ತನಿಖೆಯ ನಂತರ ಖಚಿತ ಮಾಹಿತಿ ಲಭ್ಯವಾಗಲಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಸೋಮಲಿಂಗ ಕುಂಬಾರ, ಸಿಪಿಐ ಮಲ್ಲಿಕಾರ್ಜುನ ಯಾತನೂರ್, ಪಿಎಸ್ಐ ರವಿಕುಮಾರ, ಅಪರಾಧ ವಿಭಾಗದ ಪಿಎಸ್ಐ ಕಿರಣಕುಮಾರ ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.
ಹೆಚ್ಚಿನ ಸುದ್ದಿಗಾಗಿ ಓದಿ ಕಸ್ತೂರಿ ಕಿರಣ ಪತ್ರಿಕೆ
Date: 20-12-2020 :  www.kknewsonline.in

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…