ಹುಮನಾಬಾದ-12 ವರ್ಷ ಬಾಲಕನ ಕೊಲೆ..?
ಹುಮನಾಬಾದ: ಪಟ್ಟಣ ಹೊರವಲಯದ ಆಶ್ರಯ ಬಡಾವಣೆಯಲ್ಲಿ 12 ವರ್ಷದ ಬಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಇದು ಕೊಲೆ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.
ಪಟ್ಟಣದ ಶಾದಾನ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ ಶೇಖ್ ಜಾಸೀಮ್ ಇಬ್ರಾಹಿಂ (12) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಾಲಕ ಎಂದು ಗುರುತಿಸಲಾಗಿದೆ. ಡಿ.25 ಬುಧವಾರ ಬಾಲಕನನ್ನು ಪಾಳುಬಿದ್ದ ಮನೆಯೊಂದರಲ್ಲಿ ಕರೆದುಕೊಂಡು ಹೋಗಿ ದುಷ್ಕೃತ್ಯ ನಡೆಸಲಾಗಿದೆ ಎಂದು ಹೇಳಲಾಗುತ್ತಿದ್ದು, ಈ ಕುರಿತು ಹುಮನಾಬಾದ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿನೀಡಿ ತನಿಖೆ ಶುರುಮಾಡಿದ್ದಾರೆ.
Date:26-12-2019 Time:11:30PM
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …

















