ಹೆಚ್ಚು ಮಕ್ಕಳಿರುವ ಸರ್ಕಾರಿ ಶಾಲೆಗಳಲ್ಲಿ ಸಾಂಸ್ಕೃತಿಕ ಭವನ
ಬೀದರ: ಹೆಚ್ಚು ಮಕ್ಕಳಿರುವ ಸರ್ಕಾರಿ ಶಾಲೆಗಳಲ್ಲಿ ಸಾಂಸ್ಕೃತಿಕ ಭವನ ನಿರ್ಮಿಸಲು ಆದ್ಯತೆ ಕೊಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಸಕ್ಕರೆ ಸಚಿವರಾದ ಸಿ.ಟಿ.ರವಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಕ್ಕರೆ ಕಾರ್ಖಾನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಕಷ್ಟು ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ಮಾತ್ರ ಆಯೋಜಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿಯೂ ಏರ್ಪಡಿಸುವ ಮೂಲಕ ಕಾರ್ಯಕ್ರಮಗಳು ಸಾರ್ವಜನಿಕರಿಗೂ ತಲುಪುವಂತಾಗಬೇಕು ಎಂದು ತಿಳಿಸಿದರು. ಎಲ್ಲಾ ತಾಲೂಕುಗಳನ್ನು ಒಳಗೊಂಡು ಒಂದು ವರ್ಷದ ವೇಳಾಪಟ್ಟಿಯನ್ನು ತಯಾರಿಸಿ, ಅದರಂತೆಯೇ ಕಾರ್ಯಕ್ರಮ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.
ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸಿ: ಔರಾದ್ ತಾಲೂಕು ಮಹಾರಾಷ್ಟç ರಾಜ್ಯದ ಗಡಿಯಲ್ಲಿದೆ. ಇಲ್ಲಿ ಮರಾಠಿ ಪ್ರಭಾವ ಹೆಚ್ಚಾಗಿದೆ. ಈ ಭಾಗದಲ್ಲಿ ಹೆಚ್ಚಾಗಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಇಲ್ಲಿನ ಶಾಲೆಗಳಿಗೆ ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿವೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಗೀತಾ ಪಂಡಿತರಾವ್ ಚಿದ್ರಿ ಅವರು ಕೋರಿದರು. ಇದಕ್ಕೆ ಸಚಿವರು ಪ್ರತಿಕ್ರಿಯಿಸಿ, ಅಂತಹ ಶಾಲೆಗಳ ಪಟ್ಟಿ ನೀಡಿದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸವೆ ಎಂದು ಭರವಸೆ ನೀಡಿದರು.
ಉಪಕರಣಗಳಿಗೆ ಬೇಡಿಕೆ: ಜಿಲ್ಲಾ ರಂಗಮ0ದಿರದಲ್ಲಿ ಕೆಲವು ಧ್ವನಿ ಹಾಗೂ ಬೆಳಕಿನ ಉಪಕರಣಗಳು ಕೆಟ್ಟಿವೆ. ಇವುಗಳನ್ನು ಸರಿಪಡಲು ಅಗತ್ಯ ಅನುದಾನ ಕೋರಿ ಕೇಂದ್ರ ಕಚೇರಿಗೆ ಪತ್ರ ಬರೆಯಲಾಗಿದೆ. ಆದರೆ ಈವರೆಗೆ ಹಣ ಬಂದಿಲ್ಲ. ಅನುದಾನ ಬಿಡಗಡೆ ಮಾಡಿದಲ್ಲಿ ಅನುಕೂಲವಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಸಚಿವರಲ್ಲಿ ಕೋರಿದರು.
ಕನ್ನಡ ಭವನ ನಿರ್ಮಾಣಕ್ಕೆ ಕ್ರೀಯಾಯೋಜನೆ ಸಲ್ಲಿಸಿ: ಬೀದರ ಜಿಲ್ಲೆಯಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ನಿವೇಶನವೂ ಸಿಕ್ಕಿದ್ದು, ಕಟ್ಟಡ ನಿರ್ಮಾಣಕ್ಕೆ ಸೂಕ್ತ ಕ್ರಿಯಾಯೋಜನೆಯನ್ನು ಸಲ್ಲಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಅಭಿಪ್ರಾಯ ಸಂಗ್ರಹಿಸಿ: ಸರ್ಕಾರದಿಂದ ಅಚರಿಸಲಾಗುವ ಮಹನಿಯರ ಜಯಂತಿಗಳು ಜಾತಿ ಮತ್ತು ಸಮುದಾಯ ಕೇಂದ್ರಿತವಾಗುತ್ತಿರುವುದು ಕಂಡುಬAದಿದೆ. ಇದು ಅತ್ಯಂತ ಕಳವಳಕಾರಿಯಾಗಿದ್ದು, ಜಯಂತಿಗಳ ಕುರಿತಂತೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ವರದಿ ಸಲ್ಲಿಸಬೇಕು. ಈ ಬಗ್ಗೆ ರಾಜ್ಯ ಮಟ್ಟದಲ್ಲಿ ಸಮಾಲೋಚನೆ ಸಭೆ ನಡೆಸಿ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದರು.
ಗ್ರಾಮಗಳ ಸಮೀಕ್ಷೆ ನಡೆಸಿ: ರಾಜ್ಯದಲ್ಲಿರುವ ಗ್ರಾಮಗಳ ಚರಿತ್ರೆ, ಬುಡಕಟ್ಟು ಜನರ ಬದುಕು, ಹುತಾತ್ಮರಾದ ಸೈನಿಕರು ಇತ್ಯಾದಿ ಮಾಹಿತಿಯನ್ನು ಒಳಗೊಂಡು ಗ್ರಾಮಗಳ ಸಂಪೂರ್ಣ ಮಾಹಿತಿ ಸುಲಭವಾಗಿ ಲಭ್ಯವಾಗುವಂತಾಗಲು ವಿಕಿಪಿಡಿಯಾ ಮಾದರಿಯಲ್ಲಿ ವೆಬ್‌ಸೈಟ್‌ನಲ್ಲಿ ಸೇರಿಸುವ ಯೋಜನೆಯಿದೆ. ಈ ನಿಟ್ಟಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳನ್ನು ನೋಡೆಲ್ ಅಧಿಕಾರಿಗಳಾಗಿ ನಿಯೋಜಿಸಿ ಶಾಲಾ ವಿದ್ಯಾರ್ಥಿಗಳ ಸಹಾಯ ಪಡೆದು ಗ್ರಾಮಗಳ ಸಮೀಕ್ಷೆ ನಡೆಸಬೇಕಿದೆ ಎಂದು ಅಪರ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ರುದ್ರೇಶ ಗಾಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …
















