15 ದಿನಗಳ ಕಾಲ ಘೋಡವಾಡಿ ದರ್ಗಾ ದರ್ಶನಕ್ಕೆ ಬರಬೇಡಿ – ತಹಶೀಲ್ದಾರ ನಾಗಯ್ಯಾ ಹಿರೇಮಠ
15 ದಿನಗಳ ಕಾಲ ಘೋಡವಾಡಿ ದರ್ಗಾ ದರ್ಶನಕ್ಕೆ ಬರಬೇಡಿ – ತಹಶೀಲ್ದಾರ ನಾಗಯ್ಯಾ ಹಿರೇಮಠ
ಹುಮನಾಬಾದ: ಮುಂದಿನ 15 ದಿನಗಳ ಕಾಲ ತಾಲೂಕಿನ ಐತಿಹಾಸಿಕ ಇಸ್ಮಾಯಿಲ್ ಖಾದ್ರಿ ದರ್ಗಾ ದರ್ಶನಕ್ಕೆ ಯಾರು ಬರುವುದು ಬೇಡ. ಕೊರೊನಾ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ದರ್ಶನಕ್ಕೆ ಅವಕಾಶ ಬಂದ್ ಮಾಡಲಾಗಿದೆ ಎಂದು ತಹಶೀಲ್ದಾರ ನಾಗಯ್ಯಾ ಹಿರೇಮಠ ತಿಳಿಸಿದ್ದಾರೆ.
ತಾಲೂಕಿನ ಘೋಡವಾಡಿ ಗ್ರಾಮದಲ್ಲಿ ಮಂಗಳವಾರ ಗ್ರಾಮಸ್ಥರ ಸಭೆ ನಡೆಸಿದ ತಹಶಿಲ್ದಾರರು, ಪ್ರತಿವಾರ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಬರುತ್ತಿದ್ದು, ರಾಜ್ಯ ಅಂತರ ರಾಜ್ಯಗಳ ಜನರು ಬಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಕೊರೊನಾ ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಿರುವ ಹಿನ್ನೆಲೆ ಹಾಗೂ ಸಾರ್ವಜನಿಕರ ದೂರುಗಳು ಕೂಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ 15 ದಿನಗಳ ಕಾಲ ದರ್ಶನಕ್ಕೆ ಅವಕಾಶ ಬಂದ್ ಮಾಡಲಾಗಿದೆ. ಗರ್ದಾ ಆಡಳಿತ ಮಂಡಳಿ ಕೂಡ ಸಹಕಾರ ನೀಡಿದ್ದು, ಖುದ್ದು ದರ್ಗಾ ದರ್ಶನ ಬಂದ್ ಮಾಡಲು ಮುಂದಾಗಿದ್ದಾರೆ ಎಂದು ತಿಳಿಸಿದರು.
ಕೊರೊನಾ ನೋಡಲ್ ಅಧಿಕಾರಿ ಡಾ| ಗೊವಿಂದ್ ಮಾತನಾಡಿ, ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ಸರಳವಾಗಿ ಹರಡುತ್ತದೆ. ಸಾರ್ವಜನಿಕರು ಎಚ್ಚರಿಕೆ ವಹಿಸದಿದ್ದರೆ ದರ್ಶನಕ್ಕೆ ಬರುವ ಭಕ್ತರು ಕೊರೊನಾ ಸೋಂಕು ತೆಗೆದುಕೊಂಡು ಹೋಗಬೇಕಾಗುತ್ತದೆ. ಕಾರಣ ಸಾರ್ವಜನಿಕರ ಆರೋಗ್ಯ ಹಿತ ದೃಷ್ಟಿಯಿಂದ ಪ್ರತಿಯೊಬ್ಬರು ಕಾನೂನು ಪಾಲನೆ ಮಾಡಬೇಕು. ಕಡ್ಡಾಯ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಗ್ರಾಮದಲ್ಲಿ ಕೊರೊನಾ ಸೋಂಕು ಹರಡದಂತೆ ಪ್ರತಿಯೊಬ್ಬರು ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
Date: 14-07-2020 www.kknewsonline.in
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…