Home ಸುದ್ದಿಗಳು ರಾಜ್ಯ ಸುದ್ದಿ 2 ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ

2 ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ

2 ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ

ಬೆಂಗಳೂರು: ಕೊರೊನಾ ಸೋಂಕಿನ ಆತಂಕದ ನಡುವೆಯೂ ಗ್ರಾಮ ಪಂಚಾಯತಿ ಚುನಾವಣೆಯ ದಿನಾಂಕ ಕೊನೆಗೂ ಘೋಷಣೆಯಾಗಿದ್ದು, 2020 ಡಿಸೆಂಬರ್‌ 22 ಹಾಗೂ 27 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಸೋಮವಾರ ಸುದ್ದಿಗೋಷ್ಠಿ ನಡೆಸಿರುವ ಚುನಾವಣಾ ಆಯೋಗ ಲೋಕಲ್ ಫೈಟ್‌ಗೆ ಎರಡು ಹಂತದಲ್ಲಿ ದಿನಾಂಕ ನಿಗದಿಗೊಳಿಸಿದ್ದಾರೆ. ಡಿಸೆಂಬರ್ 22 ಮತ್ತು 27 ರಂದು ಗ್ರಾಪಂ ಚುನಾವಣೆ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಹೊರಬೀಳಲಿದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯದ ಒಟ್ಟು 5,762 ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಮೊದಲ ಹಂತದಲ್ಲಿ 2,930 ಗ್ರಾಮ ಪಂಚಾಯತಿಗಳಿಗೆ ಮತದಾನ ಪ್ರಕ್ರಿಯೆಗಳು ನಡೆಯಲ್ಲಿವೆ, ಎರಡನೇ ಹಂತದಲ್ಲಿ 2,832 ಗ್ರಾಮ ಪಂಚಾಯತಿಗಳಿಗೆ ಮತದಾನ ನಡೆಯಲಿದೆ. ಬೀದರ್ ಜಿಲ್ಲೆ ಹೊರತುಪಡಿಸಿ ಉಳಿದ ಕಡೆ ಮತಪತ್ರಗಳ ಮೂಲಕ ಚುನಾವಣೆ ನಡೆಯಲಿದೆ. ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯ ವರೆಗೆ ಮತದಾನ ನಡೆಯಲ್ಲಿದೆ.

 

Date:30-11-2020

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…