Home ಸುದ್ದಿಗಳು ರಾಜ್ಯ ಸುದ್ದಿ ಸೋಮವಾರ ಬಜೆಟ್ ಅಧಿವೇಶನ ದಿನಾಂಕ ತೀರ್ಮಾನ: ಮುಖ್ಯಮಂತ್ರಿ

ಸೋಮವಾರ ಬಜೆಟ್ ಅಧಿವೇಶನ ದಿನಾಂಕ ತೀರ್ಮಾನ: ಮುಖ್ಯಮಂತ್ರಿ

ಕಾರವಾರ: ಬಜೆಟ್ ಅಧಿವೇಶನ ದಿನಾಂಕ ನಿಗದಿ ಮಾಡುವ ನಿಟ್ಟಿನಲ್ಲಿ ಬರುವ ಸೋಮವಾರ ಬೆಂಗಳೂರಿನಲ್ಲಿ ಸಚಿವ ಸಂಪುಟದ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಹೊನ್ನಾವರ ತಾಲೂಕು ಮಂಕಿಯಲ್ಲಿ ಹಮ್ಮಿಕೊಳ್ಳಲಾದ ರಾಮಕ್ಷತ್ರಿಯ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸೋಮವಾರ ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆ ಕರೆಯಲಾಗಿದ್ದು , ಮುಂದಿನ ಬಜೆಟ್ ಅಧಿವೇಶನದ ದಿನಾಂಕ ನಿಗದಿ, ಸರ್ಕಾರದ ಯೋಜನೆಗಳು ಹಾಗೂ ರಾಜ್ಯಪಾಲರ ಭಾಷಣದ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು. ಮುಂದಿನ ತಮ್ಮ ಬಜೆಟ್ ನಲ್ಲಿ ರೈತರಿಗೆ, ನೀರಾವರಿ ಮತ್ತು ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಒತ್ತು ನೀಡಿ ಮಂಡಿಸಲಾಗುವುದು. ರಾಜ್ಯದ ಅಭಿವೃದ್ಧಿಗೆ ಶಕ್ತಿಮೀರಿ ಕೆಲಸಮಾಡುವುದಾಗಿ ಅವರು ತಿಳಿಸಿದರು.

ಉಡುಪಿ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಸ್ಥಿತಿ ಗಂಭೀರವಾಗಿದೆ. ವೈದ್ಯರು ನಿರಂತರವಾಗಿ ಪ್ರಯತ್ನ ನಡೆಸುತ್ತಿದ್ದಾರೆ. ಇಂದು ಸಂಜೆ ಉಡುಪಿಗೆ ತಾವು ತೆರಳುತ್ತಿರುವುದಾಗಿ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ ಅನಂತಕುಮಾರ್ ಹೆಗಡೆ, ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ರೋಷನ್, ಜಿಲ್ಲಾ ಪೊಲೀಸ್ ಅಧೀಕ್ಷಕ ಶಿವಕುಮಾರ್ ದೇವರಾಜ್, ಶಾಸಕರಾದ ರೂಪಾಲಿ ಎಸ್.ನಾಯ್ಕ್, ದಿನಕರಶೆಟ್ಟಿ, ಸುನೀಲಗ ನಾಯ್ಕ್ ಉಪಸ್ಥಿತರಿದ್ದರು.

 

Date: 28-12-2019  Time:4:35PM

Check Also

ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ

*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…