8 ದಿನಗಳಲ್ಲಿ ನಕಲಿ ವೈದ್ಯರ ಬಾಗಿಲಿಗೆ ಬೀಗ
ಬೀದರ: ಹೌದು ಬೀದರ ಜಿಲ್ಲೆಯಲ್ಲಿ ವೈದ್ಯ ಪದವಿ ಪಡೆಯದೇ ವೈದ್ಯರಾಗಿ ಕೆಲಸ ನಿರ್ವಹಿಸುತ್ತಿರುವ ನಕಲಿ ವೈದ್ಯರ ಬಾಗಿಲಿಗೆ ಬೀಗ ಬೀಳಲಿದೆ.
ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿಚ ಪ್ರಭು ಚವ್ಹಾಣ್ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶಿಲಾ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದ್ದು, ಜಿಲ್ಲೆಯಲ್ಲಿನ ನಕಲಿ ವೈದ್ಯರನ್ನು ಗುರುತಿಸಿ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್ ಮಹಾದೇವ ತಿಳಿಸಿದರು.
ಈ ಕುರಿತು ಸಂಸದ ಭಗವಂತ ಖೂಬಾ ಮಾತನಾಡಿ, ನಕಲಿ ವೈದ್ಯರ ವಿರುದ್ದ ಜಿಲ್ಲಾಡಳಿತ ಕೂಡಲೇ ಕ್ರಮಕ್ಕೆ ಮುಂದಾಗಬೇಕು. ಯಾವುದೇ ಕಾರಣಕ್ಕೂ ಜನರ ಜೀವಕ್ಕೆ ಧಕ್ಕೆ ಆಗದಂತೆ ನೋಡಿಕೊಳ್ಳಬೇಕು. ಇದೇ ರೀತಿ ಆದರೆ ಮುಂದಿನ ದಿನಗಳಲ್ಲಿ ಜನ ಸಾಮಾನ್ಯರು ಜೀವ ಕಳೆದುಕೊಳ್ಳುವ ಸ್ಥಿತಿ ಬರಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿಗಳು ಮುಂದಿನ 8 ದಿನಗಳಲ್ಲಿ ನಕಲಿ ವೈದ್ಯರ ವಿರುದ್ದ ಕ್ರಮ ಜರಿಗಿಸುವುದಾಗಿ ಭರವಸೆ ನೀಡಿದರು.
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















