ನಿಮ್ಮ ಜಿಲ್ಲೆ
ಹುಮನಾಬಾದ : ವ್ಯಕ್ತಿಯೊಬ್ಬನ ಮೃತದೇಹ ಪತ್ತೆ.
ಹುಮನಾಬಾದ : ವ್ಯಕ್ತಿಯೊಬ್ಬನ ಮೃತದೇಹ ಪತ್ತೆ. ಹುಮನಾಬಾದ: ಪಟ್ಟಣದ ಅಗ್ನಿಕುಂಡದ ಹಿಂದಿನ ಕಾಂಪ್ಲೆಕ್ಸ್ ನಲ್ಲಿ ಭಾನುವಾರ ಬೆಳಿಗ್ಗೆ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದೆ. ಮಾಡಗಿ ಮೂಲದ ಘಾಳೆಪ್ಪೆ (30) ಮೃತಪಟ್ಟ ವ್ಯಕ್ತಿ ಎಂದು ಪೊಲೀಸರು ಗುರುತಿಸಿದ್ದು, ಯಾವ ಕಾರಣಕ್ಕೆ ವ್ಯಕ್ತಿ ಮೃತಪಟ್ಟಿದ್ದಾನೆ ಎಂಬ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ. ಕುಡಿದ ನಶೆಯಲ್ಲಿ ಬಿದ್ದು ಮೃತಪಟ್ಟಿದ್ದಾನೆಯೇ ಅಥವಾ ಕೊಲೆ ನಡೆದಿದೆ ಎಂದು ಎರಡು ಮಾರ್ಗದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದು, ಪೊಲೀಸರ ತನಿಖೆಯ ನಂತರ…
Read More »ಬಸವಕಲ್ಯಾಣ – 5 ಲಕ್ಷ ಮೌಲ್ಯದ ಗಾಂಜಾ ಜಪ್ತಿ
ಬಸವಕಲ್ಯಾಣ – 5 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಬೀದರ: 72 ಕೆಜಿ ಗಾಂಜಾ ಮಹಾರಾಷ್ಟ್ರಕ್ಕೆ ಸಾಗಿಸಲು ಮುಂದಾಗಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಬಸವಕಲ್ಯಾಣ ಪೊಲೀಸ್ ಠಾಣೆಯ ಪಿಎಸ್ಐ ಗುರು ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಿ ಮೂರು ಜನ ಆರೋಪಿಗಳು ಹಾಗೂ ಗಾಂಜಾ ವಶಪಡಿಸಿಕೊಂಡ ಘಟನೆ ಶನಿವಾರ ನಡೆದಿದೆ. ಮಲ್ಲಿಕಾರ್ಜುನ ಸಗರ, ಸಿದ್ರಾಮ ಗುದಗೆ, ಛಾಯಾ ಭೋಸರೆ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಸಸ್ತಾಪೂರ ಬಂಗ್ಲಾ ಹತ್ತಿರದ ಹೊಲವೊಂದರಲ್ಲಿ ಗಾಂಜಾ…
Read More »ಅಬಕಾರಿ ಅಧಿಕಾರಿಗಳ ದಾಳಿ: 48 ಕೆಜಿ ಗಾಂಜ ಜಪ್ತಿ.
ಅಬಕಾರಿ ಅಧಿಕಾರಿಗಳ ದಾಳಿ: 48 ಕೆಜಿ ಗಾಂಜ ಜಪ್ತಿ. ಬೀದರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಭಂಗೂರ ಗ್ರಾಮದ ಸಮೀಪ ಅಕ್ರಮ ಗಾಂಜಾ ಸಾಗಿಸುತ್ತಿದ ಖಚಿತ ಮಾಹಿತಿ ಮೇರೆಗೆ ಭಾನುವಾರ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ 48 ಕೆ.ಜಿ ಗಾಂಜ ವಶಪಡಿಸಿಕೊಂಡಿದ್ದಾರೆ. ತೆಲಂಗಾಣದ ಜಹಿರಾಬಾದ ದಿಂದ ಮಹಾರಾಷ್ಟ್ರದ ಲಾತೂರಗೆ ತೆರಳುತ್ತಿದ ವಾಹನದಲ್ಲಿ ಎರೆಡು ಕೆಜಿಯ 24 ಪ್ಯಾಕ್ಗಳು 48ಕೆಜಿ ಗಾಂಜಾ ಪತ್ತೆಯಾಗಿದ್ದು, ವಾಹನ ಸೇರಿ 11 ಲಕ್ಷ ಮೌಲ್ಯದ ಗಾಂಜ…
Read More »ಗ್ರಾಮ ಪಂಚಾಯತ ಮೂಲಕ ಗ್ರಾಮಗಳ ಅಭಿವೃದ್ಧಿ ಸಾಧ್ಯ : ಶಾಸಕ ರಾಜಶೇಖರ ಪಾಟೀಲ
ಗ್ರಾಮ ಪಂಚಾಯತ ಮೂಲಕ ಗ್ರಾಮಗಳ ಅಭಿವೃದ್ಧಿ ಸಾಧ್ಯ : ಶಾಸಕ ರಾಜಶೇಖರ ಪಾಟೀಲ ಹುಮನಾಬಾದ: ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ನಡೆಯಲಿರುವ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗೆಲ್ಲಬೇಕು ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು. ಪಟ್ಟಣದ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಏರ್ಪಡಿಸಿದ ಗ್ರಾಮ ಪಂಚಾಯತ್ ಚುನಾವಣಾ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮ ಪಂಚಾಯತ ಚುನಾವಣೆಯಲ್ಲಿ…
Read More »ಗ್ರಾ.ಪಂ ಚುನಾವಣೆ: ಬೀದರ್ ಜಿಲ್ಲೆಯಲ್ಲಿ ಮಾತ್ರ ಇವಿಎಂ ಯಂತ್ರ ಬಳಕೆ
ಗ್ರಾ.ಪಂ ಚುನಾವಣೆ: ಬೀದರ್ ಜಿಲ್ಲೆಯಲ್ಲಿ ಮಾತ್ರ ಇವಿಎಂ ಯಂತ್ರ ಬಳಕೆ. ಬೀದರ: ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬೀದರ್ ಜಿಲ್ಲೆಯಲ್ಲಿ ಮಾತ್ರ ಇ.ವಿ.ಎಂ ಯಂತ್ರಗಳ ಮೂಲಕ ಮತದಾನ ಪ್ರಕ್ರಿಯೆಗಳು ನಡೆಯಲಿದ್ದು, ಉಳಿದಂತೆ ರಾಜ್ಯದ ಇತರೆ ಎಲ್ಲಾ ಜಿಲ್ಲೆಗಳಲ್ಲಿ ಮತ ಪೆಟ್ಟಿಗೆಗಳ ಮೂಲಕ ಮತದಾನ ಪ್ರಕ್ರಿಯೆಗಳು ನಡೆಯಲಿವೆ ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟೆಯಲ್ಲಿ ತಿಳಿಸಿದ್ದಾರೆ. ಕಳೆದ ಗ್ರಾಮಪಂಚಾಯತ್ ಚುನಾವಣೆಯಲ್ಲೂ ಕೂಡ ರಾಜ್ಯದಲ್ಲಿಯೇ ಪ್ರಾಯೋಗಿಕವಾಗಿ ಬೀದರ ಜಿಲ್ಲೆಯಲ್ಲಿ ಇವಿಎಂ…
Read More »ಆರೋಪಿಗಳ ಬಂಧನಕ್ಕೆ ಗುಂಡುಹಾರಿಸಿದ ಪೊಲೀಸರು.
ಆರೋಪಿಗಳ ಬಂಧನಕ್ಕೆ ಗುಂಡುಹಾರಿಸಿದ ಪೊಲೀಸರು. ಹುಮನಾಬಾದ: ಸರ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಖಚಿತ ಮಾಹಿತಿ ಮೇರೆಗೆ ಬಂಧಿಸಲು ಮುಂದಾದ ಪೊಲೀಸರ ಮೇಲೆ ಇಬ್ಬರು ಆರೋಪಿಗಳು ಚಾಕುವಿನಿಂದ ಹಲ್ಲೆ ಮಾಡಿ ಓಡಿಹೋಗುತ್ತಿದ್ದ ಸಂದರ್ಭದಲ್ಲಿ ಪಿಎಸ್ಐ ರವಿಕುಮಾರ ಮೂರು ಸುತ್ತು ಗುಂಡು ಹಾರಿಸಿದ ಘಟನೆ ಭಾನುವಾರ ಸಂಜೆ ಪಟ್ಟಣ ಹೊರವಲಯದಲ್ಲಿ ಸಂಭವಿಸಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. https://play.google.com/store/apps/details?id=kknewsonline.in ಬೀದರ ನಗರದ ಇರಾನಿ ಬಡಾವಣೆಯ ಆರೋಪಿಗಳು ಎಂದು ಹೇಳಲಾಗುತ್ತಿದ್ದು, ಮನ್ನಾಎಖೇಳ್ಳಿ ಹಾಗೂ ಹುಮನಾಬಾದ…
Read More »ಯಾರಿಗೂ ಬೇಡವಾಯಿತೆ ಬಿಎಸ್ಎಸ್ಕೆ..?
ಯಾರಿಗೂ ಬೇಡವಾಯಿತೆ ಬಿಎಸ್ಎಸ್ಕೆ..? ಕಾರ್ಖಾನೆ ಬಂದಾದರೂ ಮೂಸಿ ನೋಡದ ರಾಜಕಾರಣಿಗಳು. ದುರ್ಯೋಧನ ಹೂಗಾರ ಹುಮನಾಬಾದ: ಸಾಲದ ಸುಳಿಯಲ್ಲಿ ನರಳುತ್ತಿರುವ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಗೆ ಆರ್ಥಿಕ ನೆರವು ಕಲ್ಪಿಸಿ ಕೈಹಿಡಿದು ಮೇಲೆತ್ತುವ ಕೆಲಸ ರಾಜ್ಯ ಸರ್ಕಾರವಾಗಲ್ಲಿ ಜಿಲ್ಲೆಯ ಜನಪ್ರತಿನಿಧಿಗಳಲ್ಲಿ ಮಾಡದ ಹಿನ್ನೆಲೆಯಲ್ಲಿ ಜಿಲ್ಲೆಯ ಸಾವಿರಾರು ಸಂಖ್ಯೆಯ ಕಬ್ಬು ಬೆಳೆಗಾರರು ಹಾಗೂ ಕಾರ್ಖಾನೆಯನ್ನು ನಂಬಿಕೊಂಡಿದ್ದ ನೂರಾರು ನೌಕರಸ್ಥ ಕುಟುಂಬಗಳು ಹತ್ತಾರು ಸಂಕಷ್ಟ ಎದುರಿಸುವಂತಾಗಿದೆ. 2018ರ ವಿಧಾನ ಸಭೆ ಚುನಾವಣೆಯಲ್ಲಿ ಎಚ್.ಡಿ ಕುಮಾರಸ್ವಾಮಿ…
Read More »ಬೆಂಗಳೂರಿನಲ್ಲಿ ಬಿಡಾರ ಹೂಡಿದ ಟಿಕೆಟ್ ಆಕಾಂಕ್ಷಿಗಳು
ಬಸವಕಲ್ಯಾಣ ಉಪ-ಚುನಾವಣೆ ಬೆಂಗಳೂರಿನಲ್ಲಿ ಬಿಡಾರ ಹೂಡಿದ ಟಿಕೆಟ್ ಆಕಾಂಕ್ಷಿಗಳು ಬೆಂಗಳೂರು: ಮುಂದೆ ನಡೆಯಲ್ಲಿರುವ ಬಸವಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಸವಕಲ್ಯಾಣ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಹಾಗೂ ಪಕ್ಷದ ಮುಖಂಡರು ಬೆಂಗಳೂರಿನಲ್ಲಿ ಬಿಡಾರ ಹೂಡಿದ್ದು, ಗುರುವಾರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಭೇಟಿಮಾಡಿ ಉಪ ಚುನಾವಣೆ ಕುರಿತು ಚರ್ಚೆ ನಡೆಸಿದರು. https://play.google.com/store/apps/details?id=kknewsonline.inಚುನಾವಣೆಯ ತಂತ್ರಗಾರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಮಗ್ರ ಚರ್ಚೆಗಳು ನಡೆದಿದ್ದು, ಬಸವಕಲ್ಯಾಣ ಕ್ಷೇತ್ರದ ಸಮಗ್ರ…
Read More »ಸರ್ಕಾರಿ ಬಸ್ ಪಲ್ಟಿ – 15ಕ್ಕೂ ಅಧಿಕ ಜನರಿಗೆ ಗಾಯ
ಸರ್ಕಾರಿ ಬಸ್ ಪಲ್ಟಿ – 15ಕ್ಕೂ ಅಧಿಕ ಜನರಿಗೆ ಗಾಯ. ಹುಮನಾವಾದ: ಬೀದರ್ ದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ತಾಲೂಕಿನ ದುಬಲಗುಂಡಿ ಕ್ರಾಸ್ ಹತ್ತಿರ ಭಾನುವಾರ ಸಂಜೆ ಉರುಳಿಬಿದ್ದ ಘಟನೆ ಸಂಭವಿಸಿದೆ. ದುಬಲಗುಂಡಿ ಕ್ರಾಸ್ ಹತ್ತಿರ ನಾಲ್ಕು ಚಕ್ರ ವಾಹನವೊಂದು ಬಂದಿದ್ದು ಅಪಘಾತ ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರಿ ಬಸ್ ಚಾಲಕ ಬ್ರೇಕ್ ಹಾಕಿದ ಪರಿಣಾಮ ಬಸ್ ಪಲ್ಟಿ ಹೊಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಸ್ಸಿನಲ್ಲಿ 27 ಜನ…
Read More »ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಉಮೇಶ ಬಿರಬಿಟ್ಟೆ ಅಟ್ಟೂರ್ ಹರ್ಷ
ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಉಮೇಶ ಬಿರಬಿಟ್ಟೆ ಅಟ್ಟೂರ್ ಹರ್ಷ ಬೀದರ: ಬಹು ವರ್ಷಗಳಿಂದ ಮರಾಠ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹೆಚ್ಚಿನ ಮುತುವರ್ಜಿ ವಹಿಸಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಿಕೊಟ್ಟಿದ್ದಾರೆ ಎಂದು ಬಸವಕಲ್ಯಾಣ ಬಿಜೆಪಿ ಯುವ ಮುಖಂಡ ಹಾಗೂ ಕೇಂದ್ರ ಆಹಾರ ನಿಗಮ ಮಂಡಳಿ ಸದಸ್ಯ ಉಮೇಶ ಬಿರಬಿಟ್ಟೆ ಅಟ್ಟೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…
Read More »


















