ನಿಮ್ಮ ಜಿಲ್ಲೆ
ಶಾಸಕ ಸಹೋದರನಿಂದ ಹಲ್ಲೆ..!
ಹುಮನಾಬಾದ: ಶಾಸಕ ರಾಜಶೇಖರ ಪಾಟೀಲರ ಸಹೋದರ ಸಂಬAಧಿ ಸಿದ್ದುಪಾಟೀಲ ಪಟ್ಟಣದ ಶರಣರೆಡ್ಡಿ ಎಂಬುವರ ಮೇಲೆ ಹಲ್ಲೆ ನಡೆಸಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸ್ಟೋನ್ ಕ್ರಷರ್ ವಿಷಯ ಕುರಿತು ಜಗಳ ನಡೆದಿದೆ ಎನ್ನಲಾಗುತ್ತಿದೆ. ಈ ಕುರಿತು ಹುಮನಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿದ್ದು ಪಾಟೀಲ ಕೂಡ ಪ್ರತಿ ದೂರು ನೀಡಿದ್ದಾರೆ ಎಂದು ಪೊಲಿಸ್ ಮೂಲಗಳು ಮಾಹಿತಿ ನೀಡಿವೆ. Date:12-12-2019 Time:4:00Pm
Read More »ಬೀದರ: ಟನ್ ಕಬ್ಬಿಗೆ 2250 ರೂ. ನಿಗದಿ
ಬೀದರ: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ನೇತೃತ್ವದಲ್ಲಿ ಶನಿವಾರ ನಡೆದ ಕಬ್ಬು ಕಾರ್ಖಾನೆಗಳ ಆಡಳಿತ ಮಂಡಳಿ ಮುಖ್ಯಸ್ಥರ ಸಭೆಯಲ್ಲಿ ಪ್ರಸಕ್ತ ಸಾಲಿನ ಹಂಗಾಮಿಗೆ ಕಬ್ಬು ಪೂರೈಕೆ ಮಾಡುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2250 ರೂ. ನಿಗದಿಗೊಳಿಸಲಾಗಿದೆ. ಕಳೆದ ವರ್ಷ ಟನ್ ಕಬ್ಬಿಗೆ ಎಫ್ಆರ್ಪಿ ದರದಂತೆ 1900 ರೂ. ನೀಡಲಾಗಿದ್ದು, ಈ ವರ್ಷವೂ ಅದೇ ದರ ನೀಡುತ್ತೇವೆ ಎಂದು ಸಭೆಯಲ್ಲಿ ಭಾಗಿಯಾಗಿದ್ದ ವಿವಿಧ ಸಕ್ಕರೆ ಕಾರ್ಖಾನೆಗಳ ಮುಖ್ಯಸ್ಥರು ಹೇಳಿದರು.…
Read More »ಬಾಕಿ ಕಾಮಗಾರಿಗಳ ಪೂರ್ಣಗೊಳಿಸಲು ಮಾರ್ಚ ಗಡುವು
ಬೀದರ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಹಿಂದಿನ ಎಲ್ಲ ಕಾಮಗಾರಿಗಳನ್ನು ಬರುವ ಮಾರ್ಚದೊಳಗೆ ಪೂರ್ಣಗೊಳಿಸಬೇಕು ಎಂದು ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಅನುಷ್ಠಾನಾಧಿಕಾರಿಗಳಿಗೆ ಗಡುವು ವಿದಿಸಿದರು. ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್ನಲ್ಲಿ ಡಿ.7ರಂದು ನಡೆದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ…
Read More »ಮಾಣಿಕಪ್ರಭು ಜಾತ್ರಾ ಮಹೋತ್ಸವಕ್ಕೆ ಚಾಲನೆ
ಹುಮನಾಬಾದ: ಶ್ರೀ ಮಾಣಿಕಪ್ರಭು ಜನ್ಮೋತ್ಸವ ಹಾಗೂ ದತ್ತ ಜಯಂತಿ ನಿಮಿತ್ಯ ಮಾಣಿಕನಗರದ ಮಾಣಿಕಪ್ರಭು ಸಂಸ್ಥಾನದ ಪ್ರಾಂಗಣದಲ್ಲಿ ಶನಿವಾರ ಗಣಪತಿ ಹೋಮ-ಹವನ ನಡೆಸುವ ಮೂಲಕ ಜಾತ್ರೆಗೆ ಚಾಲನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಶ್ರೀ ಮಾಣಿಕ ಪ್ರಭುಗಳ ಸಂಜೀವಿನಿ ಸಮಾಧಿಗೆ ಮಹಾರುದ್ರಾಭಿಷೇಕ ನೆರವೇರಿತು. ವೇದ ಮಂತ್ರ ಘೋಷಣೆಯೊಂದಿಗೆ ಅದ್ದೂರಿಯಾಗಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಸಂಸ್ಥಾನದ ಡಾ| ಜ್ಞಾನರಾಜ ಮಾಣಿಕಪ್ರಭುಗಳು ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.
Read More »6 ಜನ ಚಟ್ನಳ್ಳಿ ಗ್ರಾ.ಪಂ ಸದಸ್ಯರ ಸದಸ್ಯತ್ವ ರದ್ದು..
ಬೀದರ: ವಿವಿಧ ವಸತಿ ಯೋಜನೆ ಹಾಗೂ ಇತರೆ ದೂರುಗಳ ಹಿನ್ನೆಲೆಯಲ್ಲಿ ಬೀದರ ತಾಲೂಕಿನ ಚಟ್ನಳ್ಳಿ ಗ್ರಾಮ ಪಂಚಾಯತನ 6 ಜನ ಸದಸ್ಯರ ವಿವಿಧ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ 6 ಜನ ಸದಸ್ಯರ ಸದಸ್ಯತ್ವ ರದ್ದು ಮಾಡಿ ಕ್ರಿಮಿನಲ್ ಮೊಕ್ಕದ್ದಮೆ ದಾಖಲಿಸುವಂತೆ ರ್ಕಾರದ ಅಧೀನ ಕರ್ಯರ್ಶಿ ನಾರಾಯಣ ಡಿಜೆ ಆದೇಶ ಹೊರಡಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಂಬಗಿ ಗ್ರಾಮ ಪಂಚಾಯತ ಅಧ್ಯಕ್ಷ ವಿಜಯಕುಮಾರ ಮಸ್ಕಲೆ ವಿರುದ್ದ ಆಕ್ರಮ ಆರೋಪ ಹಿನ್ನೆಲೆಯಲ್ಲಿ ಅರೆನ್ಯಾಯಿಕ…
Read More »ಬಸವಕಲ್ಯಾಣ: ಯುವಕನ ಕೊಲೆ
ಬೀದರ: ಕುತ್ತಿಗೆ ಕತ್ತರಿಸಿ ಯುವಕನೊಬ್ಬನ ಕೊಲೆ ಮಾಡಿದ ಘಟನೆ ಬಸವಕಲ್ಯಾಣ ಪಟ್ಟಣದಲ್ಲಿ ಗುರುವಾರ ಬೆಳಗಿನ ಜಾವ ಬೆಳಕಿಗೆ ಬಂದಿದೆ. ಬಸವಕಲ್ಯಾಣ ನಗರದ ಖೂಬಾ ಕಾಲೇಜಿನ ಸಮೀಪದ ಕಟಾರೆ ಲೇಔಟ್ ಬಳಿ ಕೊಲೆ ನಡೆದಿದ್ದು, ಅಲ್ಲಾವೋದ್ದಿನ್ ತಂದೆ ಇಸ್ಮಾಯಿಲ್ (26) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಯಾರೋ ದುಷ್ಕಮಿ೯ಗಳು ಚಾಕುವಿನಿಂದ ಯುವಕನ ಹೊಟ್ಟೆಯಲ್ಲಿ ಹಾಗೂ ಕುತ್ತಿಗೆಯ ಭಾಗ ಕತ್ತರಿಸಿ ಕೊಲೆ ಮಾಡಿದ್ದು, ಈ ಕುರಿತು ಸ್ಥಳಕ್ಕೆ ಪೊಲೀಸ ಅಧಿಕಾರಿಗಳು ಭೇಟಿನೀಡಿ ಪರಿಶೀಲನೆ…
Read More »ಕ್ರೀಡೆಯಿಂದ ಮನೋಬಲ ವೃದ್ಧಿ: ನ್ಯಾ.ಪ್ರೇಮಾವತಿ ಮನಗೂಳಿ
ಬೀದರ: ಕ್ರೀಡೆಯಿಂದ ಮನೋಬಲ ವೃದ್ಧಿಯಾಗಿ ಮಾನಸಿಕ ಒತ್ತಡ ನಿವಾರಣೆಯಾಗುತ್ತದೆ. ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಹಗಲಿರುಳು ಶ್ರಮಿಸುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರಂತರ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮನಗೂಳಿ ಪ್ರೇಮಾವತಿ ಅವರು ತಿಳಿಸಿದರು. ಬೀದರ ಪೊಲೀಸ್ ಕವಾಯತು ಮೈದಾನದಲ್ಲಿ ಡಿ.3ರಂದು ಬೀದರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ಪೊಲೀಸ್ ಸಿಬ್ಬಂದಿಯ ಜವಾಬ್ದಾರಿಗಳು…
Read More »ಏಡ್ಸ್ ರೋಗವನ್ನು ದೂರವಿಡಿ, ರೋಗಿಯನ್ನಲ್ಲ: ನ್ಯಾ.ಸಿದ್ರಾಮ ಟಿ.ಪಿ
ಬೀದರ: ಸಮಾಜದಲ್ಲಿ ಏಡ್ಸ್ ರೋಗ ಪೀಡಿತರನ್ನು ಕನಿಷ್ಠವಾಗಿ ನೋಡುವ ವಾತಾವರಣ ನಿರ್ಮಾಣವಾಗಿದೆ. ನಮ್ಮ ಸುತ್ತಲಿನಲ್ಲಿ ಏಡ್ಸ್ ಪೀಡಿತರು ಕಾಣಿಸಿದಾಗ ಅವರನ್ನು ಕಡೆಗಣನೆಯ ದೃಷ್ಟಿಯಿಂದ ನೋಡದೇ ರೋಗ ನಿವಾರಿಸಲು ಸಹಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ.ಟಿ.ಪಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…
Read More »ವಿಕಲಚೇತನರ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಿ: ಡಾ|ಹೆಚ್.ಆರ್.ಮಹಾದೇವ
ಬೀದರ: ವಿಕಲಚೇತನರು ಸರ್ಕಾರದಿಂದ ಇರುವ ಸೌಲಭ್ಯಗಳ ಸದುಪಯೋಗ ಪಡೆಯಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ| ಹೆಚ್.ಆರ್.ಮಹಾದೇವ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿಕಲಚೇತನರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳು ಹಾಗೂ ಎಮ್.ಆರ್.ಡಬ್ಲೂö್ಯ ಮತ್ತು ವಿ.ಆರ್. ಡಬ್ಲೂö್ಯ ಇವರ ಸಂಯುಕ್ತಾಶ್ರಯದಲ್ಲಿ ಡಿ.3ರಂದು ನಗರದ ಜಿಲ್ಲಾ ರಂಗ ಮಂದಿರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು…
Read More »ವಿದ್ಯುತ್ ಹರಿದು 16 ಆಡುಗಳ ಸಾವು
ಹುಮನಾಬಾದ: ಪಟ್ಟಣದ ಜೇರಪೆಟ್ ಬಡಾವಣೆಯಲ್ಲಿ ಸೋಮವಾರ ರಾತ್ರಿ ವಿದ್ಯುತ್ ಸ್ಪರ್ಶದಿಂದ 16 ಆಡುಗಳು ಮೃತಪಟ್ಟ ಘಟನೆ ಸಂಭವಿಸಿದೆ. ಅಬ್ದುಲ್ ಕರಿಮ ಅಹಮದ್ ಹನಿಪ್ ಎಂಬುವರಿಗೆ ಸೇರಿದ ಆಡುಗಳು ಎಂದು ತಿಳಿದುಬಂದಿದೆ. ಹೊಲದಲ್ಲಿನ ಶೆಡ್ ಮೇಲೆ ವಿದ್ಯುತ್ ವೈರ್ ಕಟ್ಟಾಗಿ ಬಿದ್ದಿದ್ದು, ಶಡ್ ನ ಎಲ್ಲಾಕಡೆಗಳಲ್ಲಿ ವಿದ್ಯುತ್ ಹರಿದ ಕಾರಣ ಸ್ಥಳದಲ್ಲಿಯೇ ಆಡುಗಳು ಮೃತಪಟ್ಟಿವೆ ಎಂದು ಪಶು ವೈದ್ಯರು ತಿಳಿಸಿದ್ದಾರೆ. ಘಟನೆಯ ಮಾಹಿತಿ ಪಡೆದ ಹುಮನಾಬಾದ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ…
Read More »


















