#Humnabad : ಬಿಜೆಪಿ-ಕಾಂಗ್ರೆಸ್ ಕರ‍್ಯಕರ್ತರ ಮಧ್ಯೆ ಹೈಡ್ರಾಮಾ
ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಕೊಠಡಿ ಉದ್ಘಾಟನೆ ಶಿಷ್ಠಾಚಾರ ವಿಷಯಕ್ಕೆ ಗೊಂದಲ.
ಬಿಜೆಪಿ-ಕಾಂಗ್ರೆಸ್ ಕರ‍್ಯಕರ್ತರ ಮಧ್ಯೆ ಹೈಡ್ರಾಮಾ
ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಕೊಠಡಿ ಉದ್ಘಾಟನೆ ಶಿಷ್ಠಾಚಾರ ವಿಷಯಕ್ಕೆ ಗೊಂದಲ.
ಹುಮನಾಬಾದ: ತಾಲೂಕಿನ ಹಳ್ಳಿಖೇಡ(ಬಿ) ಪಟ್ಟಣದ ಪುರಸಭೆ ಹಾಗೂ ಚಿಟಗುಪ್ಪ ಪಟ್ಟಣದ ಪುರಸಭೆಯ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಕೊಠಡಿ ಉದ್ಘಾಟನೆ ಸಂದರ್ಭದಲ್ಲಿ ಬಿಜೆಪಿ-ಕಾಂಗ್ರೆಸ್ ಕರ‍್ಯಕರ್ತರ ಮಧ್ಯೆ ರಾಜಕೀಯ ಹೈಡ್ರಾಮ ಮಂಗಳವಾರ ನಡೆದಿದೆ.
ಹಳ್ಳಿಖೇಡ(ಬಿ) ಹಾಗೂ ಚಿಟಗುಪ್ಪ ಪಟ್ಟಣದ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಕೊಠಡಿ ಉದ್ಘಾಟನೆಯನ್ನು ಮಾಜಿ ಸಚಿವ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಭೀಮರಾವ ಪಾಟೀಲ ಹಾಗೂ ಡಾ| ಚಂದ್ರಶೇಖರ ಪಾಟೀಲ ನೇತೃತ್ವದಲ್ಲಿ ನಡೆದಿತ್ತು. ಕಾಂಗ್ರೆಸ್ ಪಕ್ಷದ ಆಡಳಿತ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಭಾಗವಹಿಸಿದರು. ಹಳ್ಳಿಖೇಡ(ಬಿ) ಕಾರ್ಯಕ್ರಮ ನಡೆಯುವ ಸಂದರ್ಭದಲ್ಲಿ ಬಿಜೆಪಿ ಪುರಸಭೆ ಸದಸ್ಯರು ಕರ‍್ಯಕರ್ತರು ಪುರಸಭೆಗೆ ಎದುರಿಗೆ ಕಾಂಗ್ರೆಸ್ ಮುಖಂಡರ ವಿರುದ್ಧ ಘೋಷಣೆ ಹಾಕಿದ್ದರು. ಎಂಎಲ್‌ಸಿಗಳು ಬೇಕಾದರೆ ಉದ್ಘಾಟನೆ ಮಾಡಲ್ಲಿ, ಆದರೆ, ಮಾಜಿ ಶಾಸಕರ ಯಾಕೆ ಎಂದು ಪ್ರಶ್ನಿಸಿದರು. ಪುರಸಭೆ ಸರ್ಕಾರಿ ಕಟ್ಟಡವಾಗಿದ್ದು, ರಾಜಕೀಯ ಮಾಡುವುದು ಸರಿ ಅಲ್ಲ, ಶಿಷ್ಠಾಚಾರ ಪಾಲನೇ ಮಾಡುವಲ್ಲಿ ಪುರಸಭೆ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ವಿಫಲರಾಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಕಾಂಗ್ರೆಸ್ ಕರ‍್ಯಕರ್ತರು ಕೂಡ ಆಕ್ರೋಶಗೊಂಡು ಕೆಲ ಸಮಯ ಎರೆಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತ್ತು. ಅಲ್ಲದೆ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೂಡ ಪುರಸಭೆ ಎದುರಿಗೆ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿಯ ಅಧ್ಯಕ್ಷರು ಆಗಿರುವ ಕಾರಣಕ್ಕೆ ಬಿಜೆಪಿ ಪಕ್ಷದವರು ವಿರೋಧಿಸುತ್ತಿದ್ದಾರೆಂದು ಆರೋಪಗಳು ಮಾಡಲು ಶುರುಮಾಡಿದರು. ಮಾತಿಗೆ ಮಾತು ಬೆಳೆದು ಹಳ್ಳಿಖೇಡ(ಬಿ) ಪೊಲೀಸ್ ಠಾಣೆಗೆ ತಲುಪಿತ್ತು. ಈ ಕುರಿತು ದೂರು ಪ್ರತಿ ದೂರು ನೀಡಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.
ಚಿಟಗುಪ್ಪ ಕರ‍್ಯಕ್ರಮ: ಅಧ್ಯಕ್ಷ-ಉಪಾಧ್ಯಕ್ಷ ಕೊಠಡಿ ಉದ್ಘಾಟನೆ ಕಾರ್ಯಕ್ರಮಕ್ಕೂ ಮುನ್ನ ಬಿಜೆಪಿ ಪಕ್ಷದ ಐದು ಜನ ಸದಸ್ಯರು ಸರ್ಕಾರದ ಶಿಷ್ಟಾಚಾರ ಅನುಸಾರ ಮಾಡುವಂತೆ ಮುಖ್ಯಾಧಿಕಾರಿಗೆ ದೂರು ನೀಡಿದರು. ಇದಕ್ಕೆ ಪ್ರತಿ ಉತ್ತರ ನೀಡಿದ ಮುಖ್ಯಾಧಿಕಾರಿ ಅಧ್ಯಕ್ಷ-ಉಪಾಧ್ಯಕ್ಷರ ಕೊಠಡಿ ಉದ್ಘಾಟನೆ ಕಾರ್ಯಕ್ರಮ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಪುರಸಭೆಗೆ ಯಾವುದೇ ಮಾಹಿತಿ ನೀಡಿರುವುದಿಲ್ಲ. ತಮ್ಮ ಸ್ವ-ಇಚ್ಛೆಯಿಂದ ಕಾರ್ಯಕ್ರಮ ಆಯೋಜಿಸಿಕೊಂಡಿರುತ್ತಾರೆ. ಪುರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಾರು ಕೂಡ ಭಾಗವಹಿಸಿರುವುದಿಲ್ಲ ಎಂದು ಲಿಖಿತ ಉತ್ತರ ನೀಡಿದ್ದು, ಬಿಜೆಪಿ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದೆ. ಪುರಸಭೆ ಆವರಣದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಮುಖ್ಯಾಧಿಕಾರಿಗಳಿಗೆ ಹೇಗೆ ಮಾಹಿತಿ ಇರುವುದಿಲ್ಲ, ಖಾಸಗಿ ವ್ಯಕ್ತಿಗಳು ಯಾರುಕೂಡ ಯಾವ ಸಭೆ, ಸಮಾರಂಭಗಳು, ಕಾರ್ಯಕ್ರಮ ಕೂಡ ಇಲ್ಲಿ ಏರ್ಪಡಿಸಬಹುದೇ ಎಂದು ಪ್ರಶ್ನಿಸಿದ್ದಾರೆ.
Date: 08/10/2024
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…