ಅವಶ್ಯಕತೆ ಇರುವಲ್ಲಿ ಬೋರವೆಲ್ ಕೊರೆಯಿಸಿ-ಖಾಶೆಂಪೂರ್
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಟಾಸ್ಕಪೋರ್ಸ್‍ಗೆ 50 ಲಕ್ಷ ಕೂಡಲೇ ಬಿಡುಗಡೆ ಮಾಡಬೇಕು-ಖಂಡ್ರೆ
ಬೀದರಃ ಜಿಲ್ಲೆಯಲ್ಲಿ ಅವಶ್ಯಕತೆ ಇರುವ ಕಡೆಗಳಲ್ಲಿ ಕೂಡಲೇ ಬೋರವೆಲ್ ಕೊರೆಯಿಸಿ ಜನತೆಗೆ ತೊಂದರೆಯಾಗದಂತೆ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ವ್ಯವಸ್ಥೆ ಮಾಡಬೇಕು ಎಂದು ಬೀದರ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪೂರ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಏ.8ರಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿದೆ ಎನ್ನುವ ದೂರುಗಳು ಗ್ರಾಮಸ್ಥರಿಂದ ಬರುತ್ತಿದೆ. ತುರ್ತು ಅವಶ್ಯಕತೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಿ ಉಳಿದ ಕಡೆಗಳಲ್ಲಿ ತುರ್ತಾಗಿ ಬೋರವೆಲ್ ಕೊರೆಯಿಸಿರಿ. ಶಾಸಕರ ಅನುಮತಿಗೆ ಕಾಯುತ್ತ ವಿಳಂಬ ಮಾಡಬೇಡಿ ಎಂದು ಅವರು ಇದೆ ವೇಳೆ ತಿಳಿಸಿದರು.
ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಮಾತನಾಡಿ, ಬೀದರ ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಬರ ಇದೆ. ಜನರಿಗೆ ಈ ಬಿಸಿಲಿನ ದಿನಗಳಲ್ಲಿ ಕುಡಿಯುವ ನೀರು ಪೂರೈಸುವುದು ಅತೀ ಅವಶ್ಯವಿದೆ. ನೀರು ಸಿಗದೇ ಜನರಿಗೆ ತೊಂದರೆಯಾಗಬಾರದೆಂದು ತಿಳಿದು ಕೆಲವು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ಸಭೆಯಲ್ಲಿ ವಿವರಿಸಿದ ಅವರು, ಈ ಕಡೆಗೆ ಜಿಲ್ಲಾಡಳಿತ ಕೂಡ ಗಮನ ಹರಿಸಬೇಕು. ಕುಡಿಯುವ ನೀರು ಪೂರೈಕೆಗೆ ಅನುಕೂಲವಾಗುವಂತೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರ ಅಧ್ಯಕ್ಷತೆಯಲ್ಲಿನ ಟಾಸ್ಕಪೋರ್ಸ್‍ಗೆ 50 ಲಕ್ಷ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಒತ್ತಾಯಿಸಿದರು.
ಕುಡಿಯುವ ನೀರಿನ ತೊಂದರೆ ಎದುರಿಸುತ್ತಿರುವ ಹಳ್ಳಿಗಳಲ್ಲಿ ಕುಡಿಯುವ ನೀರನ್ನು ಪೂರೈಸುವುದಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ವಹಿಸಲಾಗುತ್ತಿದೆ. ಆಗಾಗ ವಿಡಿಯೋ ಸಂವಾದ ನಡೆಸಿದ ಸಂದರ್ಭದಲ್ಲಿ ತಹಶೀಲ್ದಾರ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಈ ಕುರಿತಂತೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಎಚ್.ಆರ್ ಮಹಾದೇವ್ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷರು, ಸಂಸದರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಇದ್ದರು.
Date: 10-04-2020 Time: 5:00PM
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















