ಆರೋಪಿಗಳ ಬಂಧನಕ್ಕೆ ಗುಂಡುಹಾರಿಸಿದ ಪೊಲೀಸರು.
ಆರೋಪಿಗಳ ಬಂಧನಕ್ಕೆ ಗುಂಡುಹಾರಿಸಿದ ಪೊಲೀಸರು.
ಹುಮನಾಬಾದ: ಸರ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಖಚಿತ ಮಾಹಿತಿ ಮೇರೆಗೆ ಬಂಧಿಸಲು ಮುಂದಾದ ಪೊಲೀಸರ ಮೇಲೆ ಇಬ್ಬರು ಆರೋಪಿಗಳು ಚಾಕುವಿನಿಂದ ಹಲ್ಲೆ ಮಾಡಿ ಓಡಿಹೋಗುತ್ತಿದ್ದ ಸಂದರ್ಭದಲ್ಲಿ ಪಿಎಸ್ಐ ರವಿಕುಮಾರ ಮೂರು ಸುತ್ತು ಗುಂಡು ಹಾರಿಸಿದ ಘಟನೆ ಭಾನುವಾರ ಸಂಜೆ ಪಟ್ಟಣ ಹೊರವಲಯದಲ್ಲಿ ಸಂಭವಿಸಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.
ಬೀದರ ನಗರದ ಇರಾನಿ ಬಡಾವಣೆಯ ಆರೋಪಿಗಳು ಎಂದು ಹೇಳಲಾಗುತ್ತಿದ್ದು, ಮನ್ನಾಎಖೇಳ್ಳಿ ಹಾಗೂ ಹುಮನಾಬಾದ ಪೊಲೀಸ್ ಠಾಣೆಯಲ್ಲಿ ಸರ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಕಳ್ಳರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಲ್ಲದೇ ಆರೋಪಿಗಳು ಮಿತ್ರ ಪೊಲೀಸ್ ಎಂಬ ಗುರುತಿನ ಚಿಟಿ ತಯಾರಿಸಿಕೊಂಡು ಜನರನ್ನು ಯಾಮಾರಿಸುವ ಕೆಲಸ ಕೂಡ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಪಿಎಸ್ಐ ರವಿಕುಮಾರ, ಅಪರಾಧ ವಿಭಾಗದ ಪಿ.ಎಸ್.ಐ ಕಿರಣಕುಮಾರ ಹಾಗೂ ಸಿಬ್ಬಂದಿಗಳಾದ ಭಗವಾನ ಹಾಗೂ ನವೀನ ಅವರನ್ನು ಗಾಯಗಳಾಗಿವೆ. ಗಾಯಾಳುಗಳು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಘಟನೆಯ ಮಾಹಿತಿ ಪಡೆದ ಹೆಚ್ಚುವರಿ ಪೊಲೀಸ್ ವರಿಷ್ಠಾದಿಕಾರಿ ಡಾ। ಗೋಪಾಲ ಭೇಟಿನೀಡಿ ಮಾಹಿತಿ ಕಲೆಹಾಕಿದ್ದಾರೆ ಎಂದು ಮೂಲಗಳು ಖಚಿತ ಪಡಿಸಿವೆ.
ೊಘಟನೆಯ ವಿವರ: ದ್ವಿಚಕ್ರ ವಾಹನದ ಮೇಲೆ ಸರ ಕಳ್ಳರು ಸಂಚರಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಹುಮನಾಬಾದ್ ಪೊಲೀಸ್ ಠಾಣೆಯ ಪಿಎಸ್ಐ ರವಿಕುಮಾರ್ , ಅಪರಾಧ ವಿಭಾಗದ ಪಿಎಸ್ಐ ಕಿರಣಕುಮಾರ್ ಸಿಬ್ಬಂದಿಗಳಾದ ಭಗವಾನ, ನವೀನ ಹಾಗೂ ಮಲ್ಲು ನೇತೃತ್ವದಲ್ಲಿ ಪಟ್ಟಣದ ಹೊರವಲಯದ ರಸ್ತೆಯಲ್ಲಿ ಬಂಧಿಸಲು ಮುಂದಾದಾಗ ಇಬ್ಬರು ಆರೋಪಿಗಳು ಹಾಗೂ ಪೊಲೀಸರ ಮಧ್ಯ ಗಲಾಟೆ ಉಂಟಾಗಿದ್ದು, ಪೊಲೀಸರಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಆರೋಪಿಗಳು ಪೊಲೀಸರ ಮೇಲೆಯೇ ಹರಿತವಾದ ವಸ್ತುವಿನಿಂದ ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪಿಎಸ್ಐ ರವಿಕುಮಾರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ನಂತರ ಇಬ್ಬರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿರು ಮಾಹಿತಿ ಲಭ್ಯವಾಗಿದ್ದು, ಪ್ರಕರಣ ದಾಖಲಾದ ನಂತರ ಪೂರ್ಣ ಮಾಹಿತಿ ತಿಳಿದು ಬರಲಿದೆ.ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















