Home ನಿಮ್ಮ ಜಿಲ್ಲೆ ಬೀದರ ಉಚಿತ ಪ್ರವೇಶಕ್ಕೆ ದಾಖಲೆ ಸಿದ್ಧವಾಗಿಟ್ಟುಕೊಳ್ಳಲು ಜಿಲ್ಲಾಧಿಕಾರಿ ಸೂಚನೆ.

ಉಚಿತ ಪ್ರವೇಶಕ್ಕೆ ದಾಖಲೆ ಸಿದ್ಧವಾಗಿಟ್ಟುಕೊಳ್ಳಲು ಜಿಲ್ಲಾಧಿಕಾರಿ ಸೂಚನೆ.

ಉಚಿತ ಪ್ರವೇಶಕ್ಕೆ ದಾಖಲೆ ಸಿದ್ಧವಾಗಿಟ್ಟುಕೊಳ್ಳಲು ಜಿಲ್ಲಾಧಿಕಾರಿ ಸೂಚನೆ.

ಬೀದರ: ಪ್ರಸ್ತುತ ವರ್ಷದ ಎಸ್.ಎಸ್.ಎಲ್.ಸಿ. ಫಲಿತಾಂಶದ ನಿರೀಕ್ಷಣೆಯಲ್ಲಿರುವ ವಿದ್ಯಾರ್ಥಿಗಳು ಉಚಿತ ಪ್ರವೇಶಕ್ಕಾಗಿ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್.ಆರ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 3ರಂದು ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕಳೆದ ವರ್ಷದ ಮಾದರಿಯಲ್ಲಿಯೇ ಈ ವರ್ಷವೂ ಎಲ್ಲ ಪ್ರಕ್ರಿಯೆಯು ತೀವ್ರವಾಗಿ ನಡೆದು ಜಿಲ್ಲೆಯಲ್ಲಿನ ಪ್ರತಿಭಾವಂತ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು. ಈ ವರ್ಷದ 2020-21ನೇ ಸಾಲಿನಲ್ಲಿ ಸರಕಾರಿ ಮತ್ತು ಅನುದಾನಿತ ಪ್ರೌಢಶಾಲೆಯ ಕನ್ನಡ, ಉರ್ದು, ಮರಾಠಿ ಮಾಧ್ಯಮದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಬೀದರ ಜಿಲ್ಲೆಯ ಅನುದಾನಿತ ಹಾಗೂ ಅನುದಾನ ರಹಿತ ಪಿ.ಯು.ಸಿ. ಕಾಲೇಜಿನಲ್ಲಿ ಜಿಲ್ಲಾಡಳಿತ ವತಿಯಿಂದ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಮತ್ತು ಪ್ರಾಂಶುಪಾಲರ ಸಹಕಾರದಿಂದ 2020-21ನೇ ಸಾಲಿಗಾಗಿ ಉಚಿತ ಪ್ರವೇಶ ಯೋಜನೆಯನ್ನು ಸರಿಯಾಗಿ ಅನುಷ್ಠಾನಗೊಳಿಸಲು ಕಾಳಜಿ ವಹಿಸಬೇಕು ಎಂದು ತಿಳಿಸಿದರು.

Date: 03-08-2020   www.kknewsonline.in 

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…