ಕನ್ನಡ ಬಾವುಟಕ್ಕೆ ಬೆಂಕಿ – ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ
ಕನ್ನಡ ಬಾವುಟಕ್ಕೆ ಬೆಂಕಿ – ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ
ಹುಮನಾಬಾಧ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಅವಮಾನಿಸಿದ ಕಿಡಿಗೆಡಿಗಳನ್ನು ಕೂಡಲೇ ಕಾನೂನು ಕ್ರಮ ತೆಗೆದುಕೊಳ್ಳುವಂತೆ ರಾಜ್ಯದ ಮುಖ್ಯಮಂತ್ರಿಗಳು ಮಹಾರಾಷ್ಟç ಸರ್ಕಾರಕ್ಕೆ ಒತ್ತಾಯಿಸಬೇಕು ಎಂದು ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ರಾಜ್ಯ ಕಾರ್ಯದರ್ಶಿ ನವೀನ್ ಬತಲಿ ಒತ್ತಾಯಿಸಿದ್ದಾರೆ.
Like Facebook Page : https://fb.watch/9WV5RJoNcY/
ಅಲ್ಲಿ ನಡೆದ ಪ್ರತಿಭಟನೆ ವೇಳೆ ಕನ್ನಡಕ್ಕೆ ಅಗೌರವ ತರುವ ಹಿನ್ನೆಲೆಯಲ್ಲಿ ಕೊಲ್ಲಾಪುರದಲ್ಲಿ ನಡೆದ ಕೃತ್ಯದ ವಿರುದ್ಧ ರಾಜ್ಯ ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು. ಅಲ್ಲಿನ ಪೊಲೀಸರ ಎದುರೇ ಕನ್ನಡದ ಬಾವುಟವನ್ನು ಸುಟ್ಟು ಹಾಕುವ ಮೂಲಕ ವಿಕೃತಿ ಮೆರೆದಿರುವುದು ಖಂಡನೀಯವಾಗಿದೆ. ನೆರೆ ರಾಜ್ಯದವರೇ ಉದ್ದೇಶ ಪೂರ್ವಕ ಸಾರ್ವಜನಿಕ ವಲಯದಲ್ಲಿ ಬೆಂಕಿ ಹಚ್ಚುವ ಕಾರ್ಯ ಮಾಡಬಾರದು. ಆಯಾ ರಾಜ್ಯದವರಿಗೆ ಅವರ ರಾಜ್ಯದ ಬಗ್ಗೆ ಗೌರವ, ಮರಿಯಾದೆ ಇರುವುದು ಸಹಜ. ಹಾಗಂತ ಇನ್ನೊಬ್ಬರ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದು ಸೂಕ್ತ ಅಲ್ಲ. ರಾಜ್ಯದ ಧ್ವಜಕ್ಕೆ ಬೆಂಕಿ ಹಚ್ಚಿ ಅಗೌರವ ಸಹಿಸುವುದಿಲ್ಲ. ಕೂಡಲೇ ರಾಜ್ಯದ ಮುಖ್ಯಮಂತ್ರಿಗಳು ಸಮಾಜದಲ್ಲಿ ಬೆಂಕಿ ಹಚ್ಚುತ್ತಿರುವ, ಧ್ವಜಕ್ಕೆ ಬೆಂಕಿ ಹಚ್ಚಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ಒತ್ತಾಯಿಸಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
KKNEWS MOBILE APP: https://play.google.com/store/apps/details?id=kknewsonline.in
Date: 16-12-2021 :
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…


















