ಕೊಹಿನೂರ ಗ್ರಾಮದಲ್ಲಿ 10 ಜನರಿಗೆ ಪಾಸಿಟಿವ್

ಕೊಹಿನೂರ ಗ್ರಾಮದಲ್ಲಿ 10 ಜನರಿಗೆ ಪಾಸಿಟಿವ್
ಬೀದರ: ಮುಂಬೈನಿಂದ ಬಸವಕಲ್ಯಾಣ ತಾಲೂಕಿನ ಕೊಹಿನೂರ ಗ್ರಾಮದಕ್ಕೆ ಬಂದಿದ 10 ಜನರಿಗೆ ಕೋವಿಡ್-19 ಪಾಸಿಟಿವ್ ಬಂದಿದ್ದು, ಜಿಲ್ಲೆಯಲ್ಲಿ ಒಟ್ಟಾರೆ 95ಕ್ಕೆ ಏರಿಕೆಯಾಗಿದೆ.
ಮುಂಬೈನಿಂದ ಬಂದಿದ ಜನರು ಕೊಹಿನೂರ ಗ್ರಾಮದ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಮಹಾರಾಷ್ಟ್ರದಿಂದ ಬಂದಿರುವ ಹಿನ್ನೆಲೆಯಲ್ಲಿ ಎಲ್ಲಾ ಜನರ ಮಾದರಿ ಪಡೆದು ಪರೀಕ್ಷೆಗಾಗಿ ಲ್ಯಾಬಿಗೆ ಕಳುಹಿಸಲಾಗಿತ್ತು. ಇದೀಗ ಮಂಗಳವಾರ ವರದಿಬಂದಿದ್ದು, 10 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಸೋಮವಾರ ರಾತ್ರಿ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿನೀಡಿ 10 ಜನರನ್ನು ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅಲ್ಲದೆ, ಗ್ರಾಮದಲ್ಲಿ ಸೀಲ್ ಡೌನ್ ಮಾಡಲಾಗಿದ್ದು, ಗ್ರಾಮದಲ್ಲಿ ಸಂಚಾರಕ್ಕೆ ಕಡಿವಾಣ ಹಾಕಲಾಗಿದೆ. ಪ್ರಥಮಿಕ ಹಾಗೂ ಎರಡನೇ ಹಂತದ ಸಂಪರ್ಕಕ್ಕೆ ಬಂದಿರುವ ಜನರ ಕುರಿತು ಆರೋಗ್ಯಾಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ.
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …















