Home ನಿಮ್ಮ ಜಿಲ್ಲೆ ಬೀದರ ಖಾಸಗಿ ಆಸ್ಪತ್ರೆ ತೆರೆದು ಚಿಕಿತ್ಸೆ ನೀಡಿ.

ಖಾಸಗಿ ಆಸ್ಪತ್ರೆ ತೆರೆದು ಚಿಕಿತ್ಸೆ ನೀಡಿ.

ಬೀದರ: ಖಾಸಗಿ ಆಸ್ಪತ್ರೆಗಳ ವೈದ್ಯರು ಕ್ಲಿನಿಕ್ ತೆರೆದು ಜನರಿಗೆ ಆರೋಗ್ಯ ಸೇವೆ ನೀಡಬೇಕು ಎಂದು ತಹಸೀಲ್ದಾರ ನಾಗಯ್ಯಾ ಹಿರೇಮಠ ಸೂಚಿಸಿದರು.

ಪಟ್ಟಣದ ತಹಸೀಲ್ದಾರರ ಕಚೇರಿಯಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರ ಸಭೆ ನಡೆಸಿ ಮಾಹಿತಿ ನೀಡಿದರು.

ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡುವುದು ಮುಖ್ಯವಾಗಿದ್ದು, ಕೊರೊನಾ ವೈರಾಣು ಇರುವ ಶಂಕಿತರ ಹೊರೆತುಪಡಿಸಿ ಇನ್ನುಳಿದ ಚಿಕಿತ್ಸೆಗಳು ನೀಡಬೇಕು ಎಂದು ಜಿಲ್ಲಾಧಿಕಾರುಗಳು ಸೂಚಿಸಿದ್ದಾರೆ. ಯಾರು ಆಸ್ಪತ್ರೆ ತೆರೆಯುವುದಿಲ್ಲ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.ಪ

ತಾಲೂಕು ಆರೋಗ್ಯಾಧಿಕಾರಿ ಅಶೋಕ ಮೈಲಾರೆ ಮಾತನಾಡಿ, ಗ್ರಾಮೀಣ ಭಾಗದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಉಚಿತ ಸ್ಯಾನಿಟೈಸರ್ ನೀಡಲಾಗುವುದು. ವೈದ್ಯರು ಕೂಡ ಜಾಗೃತೆ ವಹಿಸಿ ಚಿಕಿತ್ಸೆ ಬೀಡಬೇಕು. ಸರ್ಕಾರದ ನಿಯಮ ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು.

ಡಾ. ನಾಗನಾಥ ಹುಲಸೂರೆ ಮಾತನಾಡಿ, ಬಂದ್ ಹಿನ್ನೆಲೆಯಲ್ಲಿ ಜನರಿಗೆ ಆರೋಗ್ಯ ಸಮಸ್ಯೆ ಉಂಟಾಗಬಾರದು ಎಂದು ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವಂತೆ ಸೂಚಿಸಿದೆ. ಇ ಹಿನ್ನೆಲೆಯಲ್ಲಿ ಎಲ್ಲಾ ಖಾಸಗಿ ವೈದ್ಯರು ಸೂಕ್ತ ನಿಯಮಗಳು ಪಾಲಿಸಿ ಚಿಕಿತ್ಸೆ ನೀಡಬೇಕು ಎಂದು ಹೇಳಿದರು.

Check Also

ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ

ಬೀದರ: ಬೀದರ‌ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …