ಗ್ಯಾಸ್ ಸೋರಿಕೆಯಿಂದ ಇಬ್ಬರ ಯುವಕರ ಸಾವು..?
ಗ್ಯಾಸ್ ಸೋರಿಕೆಯಿಂದ ಇಬ್ಬರ ಯುವಕರ ಸಾವು..
ಹುಮನಾಬಾದ: ಪಟ್ಟಣ ಹೊರವಲಯದ ಕೈಗಾರಿಕಾ ಪ್ರದೇಶದ ಕೆಮಿಕಲ್ ಕಾರ್ಖಾನೆಯೊಂದರಲ್ಲಿ ಗ್ಯಾಸ್ ಸೋರಿಕೆಯಿಂದ ಇಬ್ಬರು ಯುವಕರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.
ಶ್ರೀ ಪ್ರಸನ್ನ ಪ್ರೀ ಪೋಸಶಿಂಗ್ ಲಿಮಿಟೆಡ್ ಕಂಪನಿಯಲ್ಲಿ ಭಾನುವಾರ ರಾತ್ರಿ ಅವಘಡ ಸಂಭವಿಸಿದೆ. ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಕೆಮಿಕಲ್ ಗ್ಯಾಸ್ ಸೋರಿಕೆಯಿಂದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ತಾಲೂಕಿನ ವಡ್ಡನಕೇರಾ ಗ್ರಾಮದ
ಮಹ್ಮದ್ ಶಾಬಾದ್ (21) ಹಾಗೂ ಮಧ್ಯಪ್ರದೇಶದ ಇಂದ್ರಜೀತ್ ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನೂರಾರು ಜನರು ಸರ್ಕಾರಿ ಆಸ್ಪತ್ರೆ ಹತ್ತಿರ ಜಮಾಗೊಂಡಿದರು. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಘಟಕ ಸ್ಥಗಿತಗೊಳಿಸುವ ಕಾರ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕಾರ್ಖಾನೆಗೆ ಸಂಬಂಧಿಸಿದವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
Date:21-01-2023 Time: 11:20pm
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















