Home ನಿಮ್ಮ ಜಿಲ್ಲೆ ಬೀದರ ಗ್ರಾಮ ಪಂಚಾಯತ ಮೂಲಕ ಗ್ರಾಮಗಳ ಅಭಿವೃದ್ಧಿ ಸಾಧ್ಯ : ಶಾಸಕ ರಾಜಶೇಖರ ಪಾಟೀಲ

ಗ್ರಾಮ ಪಂಚಾಯತ ಮೂಲಕ ಗ್ರಾಮಗಳ ಅಭಿವೃದ್ಧಿ ಸಾಧ್ಯ : ಶಾಸಕ ರಾಜಶೇಖರ ಪಾಟೀಲ

ಗ್ರಾಮ ಪಂಚಾಯತ ಮೂಲಕ ಗ್ರಾಮಗಳ ಅಭಿವೃದ್ಧಿ ಸಾಧ್ಯ : ಶಾಸಕ ರಾಜಶೇಖರ ಪಾಟೀಲ

ಹುಮನಾಬಾದ: ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ನಡೆಯಲಿರುವ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗೆಲ್ಲಬೇಕು ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು.

ಪಟ್ಟಣದ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಏರ್ಪಡಿಸಿದ ಗ್ರಾಮ ಪಂಚಾಯತ್ ಚುನಾವಣಾ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಾಮ ಪಂಚಾಯತ ಚುನಾವಣೆಯಲ್ಲಿ ಯಾವುದೇ ಪಕ್ಷದ ಗುರುತು ಇರುವುದಿಲ್ಲ. ಆದರೆ, ಪಕ್ಷದ ಬೆಂಬಲಿತ ಅಭ್ಯರ್ಥಿ ಗಳು ಚುನಾಚಣೆಯಲ್ಲಿ ಸ್ಪರ್ಧೆನಡೆಸುತ್ತಿದ್ದು, ಈ ಚುನಾವಣೆಯಲ್ಲಿ ಹೆಚ್ಚಿನ ಅಭ್ಯರ್ಥಿಗಳು ಗೆಲ್ಲಬೇಕು. ಗ್ರಾಮ ಪಂಚಾಯತ ಮೂಲಕ ಗ್ರಾಮಗಳ ಅಭಿವೃದ್ಧಿ ಮಾಡಲು ಸಾಧ್ಯವಿದ್ದು, ಕಾಂಗ್ರೆಸ್ ಬೆಂಬಲಿತ ಸೂಕ್ತ ವ್ಯಕ್ತಿಗಳನ್ನು ಪಕ್ಷದ ಕಾರ್ಯಕರ್ತರು ಗೆಲ್ಲಿಸಬೇಕು ಎಂದು ಹೇಳಿದರು.

ಕಳೆದ ಜಿಲ್ಲಾ ಪಂಚಾಯತ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಕೆಲಸ ಮಾಡಿದ್ದೇವೆ. ಆದರೆ, ಕೆಲವರ ನಡೆ ಅಸಮಧಾನ ತಂದಿದೆ. ಅನೇಕರು ಅನೇಕ ರೀತಿಯ ದೂರುಗಳು ಕೂಡ ಹೇಳುತ್ತಿದ್ದಾರೆ. ಈ ಹಿಂದೆ ನಡೆದ ಘಟನೆಗಳು ಮರೆತು ಮುಂದಿನ ಚುನಾವಣೆಗಳ ಕಡೆಗೆ ಕಾರ್ಯಕರ್ತರು ಶ್ರಮಿಸಬೇಕು. ಕಳೆದ ಅನೇಕ ವರ್ಷಗಳಿಂದ ನಡೆಸ ವಿವಿಧ ಸಾಧನೆ, ಅಭಿವೃದ್ಧಿ ಕಾರ್ಯಗಳ ಕುರಿತು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿರು.

ಮಾಜಿ ಜಿ.ಪಂ ಸದಸ್ಯ ವೀರಣ್ಣಾ ಪಾಟೀಲ, ಹಳ್ಳಿಖೇಡ ಬಿ ಪುರಸಭೆ ಅಧ್ಯಕ್ಷ ಮಹಾಂತಯ್ಯಾ ತೀರ್ಥ, ತಾಲೂಕು ಪಂಚಾಯತ ಅಧ್ಯಕ್ಷ ರಮೇಶ ಡಾಕುಳಗಿ, ಪುರಸಭೆ ಅಧ್ಯಕ್ಷೆ ಕಸ್ತೂರಬಾಯಿ, ಕೇಶವರಾವ ತಳಘಕರ್, ಎಪಿಎಂಸಿ ಅಧ್ಯಕ್ಷ ಡಾ। ಭದ್ರೇಶ ಪಾಟೀಲ, ಸ್ಥಾತಿ ಸಮಿತಿ ಅಧ್ಯಕ್ಷ ರಾಮರಾವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಸರ್ ಮಿಯ್ಯಾ, ಯುವ ಕಾಂಗ್ರೆಸ್ ಮುಖಂಡ ಉಮೇಶ ಜಮಗಿ ಸೇರಿದಂತೆ ಅನೇಕರು ಇದ್ದರು.

Date:05-12-2020

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…