ನಾಡಗೀತೆಗೆ ಅವಮಾನ ಇಬ್ಬರು ಶಿಕ್ಷಕರು ಅಮಾನತು.
ಬೀದರ: ಪಶು ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಿದ್ದ 2019-20 ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನಾಡಗೀತೆ ಹಾಡುವಾಗ ಮೂತ್ರ ವಿಸರ್ಜನೆ ಮಾಡಿ ಅಸಭ್ಯವರ್ತನೆ ಮಾಡಿದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಔರಾದ ತಾಲೂಕಿನ ಹಿಪ್ಪಳಗಾಂವ ಸರ್ಕಾರಿ ಶಾಲೆಯ ಶಿಕ್ಷಕ ವಿರೇಶ ಹಾಗೂ ಗಂಗಾರಾಮ ತಾಂಡ ಸರ್ಕಾರಿ ಶಾಲೆಯ ಶಿಕ್ಷಕ ವಿಜಯಕುಮಾರ ರಠೋಡ ಎಂಬ ಶಿಕ್ಷಕರನ್ನು ಶಿಕ್ಷಣ ಇಲಾಖೆ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿ ಅಧ್ಯಕ್ಷೆಯಲ್ಲಿ ನಡೆದ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಶಿಕ್ಷಕರು ಅದೇ ಪ್ರಾಂಗಣದಲ್ಲಿ ಮೂತ್ರವಿಸರ್ಜನೆ ಮಾಡಿ ನಾಡಗೀತೆ ಹಾಗೂ ಕ್ರೀಡಾಕೂಟಕ್ಕೆ ಶಿಕ್ಷಣ ಇಲಾಖೆಗೆ ಅವಮಾನಿಸಿದ್ದಾರೆ ಎಂದು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ ಹಿನ್ನೆಲೆಯಲ್ಲಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
ದಿನಾಂಕ: 15-02-2020
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















