ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸಿ – ಸುಬೋಧ್ ಯಾದವ್
ಬೀದರ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡ 30 ಲಕ್ಷ ವರೆಗಿನ ಕಾಮಗಾರಿಗಳನ್ನು 3 ತಿಂಗಳೊಳಗೆ, 30 ಲಕ್ಷದಿಂದ 1 ಕೋಟಿವರೆಗಿನ ಕಾಮಗಾರಿಗಳನ್ನು 5 ತಿಂಗಳೊಳಗೆ, 1 ಕೋಟಿ ರೂ.ನ ಕಾಮಗಾರಿಗಳನ್ನು 6 ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿಗಳಾದ ಸುಬೋಧ್ ಯಾದವ್ ಅವರು ಸಂಬಂಧಿಸಿದ ಎಲ್ಲ ಅನುಷ್ಠಾನಾಧಿಕಾರಿಗಳಿಗೆ ಗಡುವು ವಿದಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿಸೆಂಬರ್ 20ರಂದು ಸಭೆ ನಡೆಸಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡ ಕಾಮಗಾರಿಗಳ ಬಗ್ಗೆ 3 ಗಂಟೆಗೂ ಹೆಚ್ಚು ಕಾಲ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ನಿವೇಶನ ಪರಿಶೀಲನೆ, ಕಾಮಗಾರಿ ಸ್ಥಳ ಮತ್ತು ಕಾಮಗಾರಿ ಬದಲಾವಣೆಯಂತಹ ಪ್ರಕ್ರಿಯೆಗಳನ್ನು ಕೂಡ ತಿಂಗಳೊಳಗೆ ಮುಗಿಸಬೇಕು ಎಂದು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
2019ರ ಅಕ್ಟೋಬರ್ 11ರವರೆಗೆ 109 ಕಾಮಗಾರಿಗಳು ಮತ್ತು 2019ರ ಡಿಸೆಂಬರ್ 20ರವರೆಗೆ 64 ಕಾಮಗಾರಿಗಳು ಆರಂಭವಾಗದೇ ಇರುವ ಬಗ್ಗೆ ಕಾರ್ಯದರ್ಶಿಗಳು ಸಂಬಂಧಿಸಿದ ಇಲಾಖೆಗಳಿಂದ ವಿವರಣೆ ಕೇಳಿದರು.
ಲೋಕೋಪಯೋಗಿ ಇಲಾಖೆಯಿಂದ ಬಾಕಿ ಇರುವ 31 ಕಾಮಗಾರಿಗಳ ಪೈಕಿ 22 ಕಾಮಗಾರಿಗಳಿಗೆ ಈ ವರ್ಷ ಮಂಜೂರಾತಿ ಸಿಕ್ಕಿದೆ. ಇನ್ನುಳಿದ 9 ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಲೋಕೋಪಯೋಗಿ ಇಲಾಖೆಯ ಅಭಿಯಂತರರು ತಿಳಿಸಿದರು.
13 ಕಾಮಗಾರಿಗಳನ್ನು ಆರಂಭಿಸದೇ ಇರುವ ಪಂಚಾಯತ್ ರಾಜ್ಯ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ಕಾಮಗಾರಿಗಳ ಅನುಷ್ಠಾನಕ್ಕೆ ಒತ್ತು ಕೊಡುವಂತೆ ಸೂಚಿಸಲಾಯಿತು.
2018-19ನೇ ಸಾಲಿನ ಕ್ರಿಯಾ ಯೋಜನೆಗಳಲ್ಲಿನ ಕಾಮಗಾರಿಗಳಿಗೆ ಅನುಮತಿ ನೀಡಿ ವರ್ಷವಾದರೂ ಅವುಗಳ ಪ್ರಗತಿ ತೃಪ್ತಿಕರವಾಗಿಲ್ಲ. ಕಾಮಗಾರಿ ಬದಲಾವಣೆ, ಅನುಷ್ಠಾನ ಇಲಾಖೆ ಬದಲಾವಣೆ, ಕಾಮಗಾರಿ ರದ್ದು ಪಡಿಸುವುದು, ಕಾಮಗಾರಿಗೆ ಹೆಚ್ಚುವರಿ ಅನುದಾನಕ್ಕೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ಸರಿಯಾದ ಸಮಯಕ್ಕೆ ಕಳುಹಿಸಬೇಕು. ಕಡತಗಳನ್ನು ವರ್ಷಗಟ್ಟಲೇ ಇಟ್ಟುಕೊಂಡು ಕೂಡುವುದು ಸರಿಯಲ್ಲ. ಡಿಸೆಂಬರ್ ಮಾಹೆಯ ಮುಗಿಯಲು ಬಂದಿದೆ. ಕಾಮಗಾರಿಗಳನ್ನು ಆರಂಭಕ್ಕೆ ಸಂಬಂಧಿಸಿದ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸಬೇಕು. ಎಲ್ಲ ಕಾಮಗಾರಿಗಳು ನಿಗದಿಪಡಿಸಿದ ಕಾಲಮಿತಿಯೊಳಗೆ ಅವುಗಳ ಅನುಷ್ಠಾನಕ್ಕೆ ಎಲ್ಲ ಅನುಷ್ಠಾನಾಧಿಕಾರಿಗಳು ಹೆಚ್ಚಿನ ಒತ್ತು ಕೊಡಬೇಕು. ಭೌತಿಕ ಹಾಗೂ ಆರ್ಥಿಕ ಪ್ರಗತಿ ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಈ ಹಿಂದೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆಲವು ಕಾಮಗಾರಿಗಳನ್ನು ಆರಂಭಿಸಲು ಮತ್ತು ಪೂರ್ಣಗೊಳಿಸುವಂತೆ ಕಾಲಮಿತಿಯನ್ನು ನಿರ್ಧರಿಸಿ ತಿಳಿಸಿದ್ದರೂ ಕೆಲ ಇಲಾಖೆಗಳು ಅನಗತ್ಯ ವಿಳಂಬ ಮಾಡುತ್ತಿವೆ. ಅಧಿಕಾರಿಗಳು ಇಲ್ಲದ ನೆಪ ಹೇಳಿ ಕಾಲ ಹರಣ ಮಾಡಿದರೆ ಕಾಮಗಾರಿ ಅನುಷ್ಠಾನ ಮತ್ತು ಕಾಮಗಾರಿ ಅನುದಾನ ಬಳಕೆಯಾಗುವುದಿಲ್ಲ. ಇನ್ಮುಂದೆ ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಅಧಿಕಾರಿಗಳು ಮುಂದೆ ತೊಂದರೆ ಎದುರಿಸಬೇಕಾಗುತ್ತದೆ ಎಂದು ಕಾರ್ಯದರ್ಶಿಗಳು ಇದೆ ವೇಳೆ ಎಚ್ಚರಿಕೆ ನೀಡಿದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯ ಕಾಮಗಾರಿಗಳ ಅನುಷ್ಠಾನದಲ್ಲಿ ಬೀದರ ಜಿಲ್ಲೆಯ ಪ್ರಗತಿ ಹೇಳಿಕೊಳ್ಳುವಂತಿಲ್ಲ. ಬೀದರ ಜಿಲ್ಲೆಗಿಂತ ಹೆಚ್ಚಿನ ಹುದ್ದೆಗಳು ಖಾಲಿ ಇರುವ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೆಕೆಆರ್ಡಿಬಿ ಕಾಮಗಾರಿಗಳ ಅನುಷ್ಠಾನ ಚೆನ್ನಾಗಿದೆ. ತಾಂತ್ರಿಕ ತೊಂದರೆಯಂತಹ ಕಾರಣಗಳನ್ನು ಹೇಳದೇ ನುರಿತವರಲ್ಲಿ ಕೇಳಿ ಶ್ರದ್ಧೆಯಿಂದ ಕೆಲಸ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ.ಹೆಚ್.ಆರ್.ಮಹಾದೇವ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಗ್ಯಾನೇಂದ್ರಕುಮಾರ ಗಂಗವಾರ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಹಾಗೂ ಇತರರು ಇದ್ದರು.
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …
















