Home ನಿಮ್ಮ ಜಿಲ್ಲೆ ಕಲಬುರಗಿ ನೂತನ ಸಚಿವರ ಖಾತೆ ಹಂಚಿಕೆಯಲ್ಲಿ ಹಸ್ತಕ್ಷೇಪ ಇಲ್ಲ: ಬಿ.ವೈ.ವಿಜಯೇಂದ್ರ

ನೂತನ ಸಚಿವರ ಖಾತೆ ಹಂಚಿಕೆಯಲ್ಲಿ ಹಸ್ತಕ್ಷೇಪ ಇಲ್ಲ: ಬಿ.ವೈ.ವಿಜಯೇಂದ್ರ

ನೂತನ ಸಚಿವರ ಖಾತೆ ಹಂಚಿಕೆಯಲ್ಲಿ ಹಸ್ತಕ್ಷೇಪ ಇಲ್ಲ: ಬಿ.ವೈ.ವಿಜಯೇಂದ್ರ

ಕಲಬುರಗಿ: ಏಳು ಜನ ಸಚಿವರಿಗೆ ಖಾತೆ ಹಂಚಿಕೆ ಮತ್ತು ಹತ್ತು ಜನ ಸಚಿವರ ಖಾತೆ ಬದಲಾವಣೆಯಲ್ಲಿ ನನ್ನ ಹಸ್ತಕ್ಷೇಪ ಇಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಗುರುವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳಿಗೆ ಆಡಳಿತ ನಡೆಸಿದ ಸೂಕ್ತ ಅನುಭವ ಇದೆ. ಸಚಿವರ ಅಸಮಾಧಾನವನ್ನು ಮುಖ್ಯಮಂತ್ರಿಗಳು ಸರಿಪಡಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪನವರ ರಾಜಕೀಯ ಹೋರಾಟ ಮತ್ತು ಬಿಜೆಪಿ ಕಾರ್ಯಕರ್ತರ ಪರಿಶ್ರಮದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಸರ್ಕಾರದಲ್ಲಿ ಯಾರ ಹಸ್ತಕ್ಷೇಪದ ಅಗತ್ಯವೂ ಬೀಳುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.

Date: 21-01-2021: www.kknewsonline.in

Check Also

ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ

*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…