ಬೀದರ ಕಲಂ 144 ಜಾರಿ

ಬೀದರ: ಭಾರತದ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮೆರವಣಿಗೆ, ಪ್ರತಿಭಟನೆ ಮುಂಜಾಗ್ರತ ಕ್ರಮವಾಗಿ ಬೀದರ್ ಜಿಲ್ಲೆಯಾದ್ಯಂತ ಬುಧವಾರ ಡಿ.12 ಮಧ್ಯರಾತ್ರಿ 12 ಗಂಟೆಯಿಂದ ಡಿ.21 ರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ| ಎಚ್.ಆರ್ ಮಹಾದೇವ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ವಿವಿಧ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ಡಿಸೆಂಬರ್ 19 ರಂದು ಬೀದರ ಜಿಲ್ಲೆಯಾದ್ಯಂತ ಪ್ರತಿಭಟನೆ, ಮೆರವಣಿಗೆ, ಚಳುವಳಿ ನಡೆಸುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯಾಗಿ ಡಿಸೆಂಬರ್ 18ರ ರಾತ್ರಿ 12 ಗಂಟೆಯಿಂದ ಡಿಸೆಂಬರ್ 21ರ ರಾತ್ರಿ 12 ಗಂಟೆ ವರೆಗೆ ಸಿ.ಆರ್.ಪಿ.ಸಿ. ಸೆಕ್ಷನ್ 144, 144ಎ ರನ್ವಯ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಬುಧವಾರ ಆದೇಶ ಹೊರಡಿಸಿದ್ದಾರೆ. 5 ಜನರಿಗಿಂದ ಹೆಚ್ಚಿನ ಜನರ ಗುಂಪುಗಳ ಮಾಡುವುದು. ಅಥವಾ ಯಾವುದೇ ಶಸ್ತ್ರಾಸ್ತ್ರಗಳು ಸಾಗಿಸುವಂತಿಲ್ಲ ಎಂದು ಆದೇಶದಲ್ಲಿ ವಿವರಿಸಲ್ಲಾಗಿದೆ.

 

 

Date:18-12-2019  Time:10:15PM

Check Also

ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ

*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…