Home ಸುದ್ದಿಗಳು ರಾಜ್ಯ ಸುದ್ದಿ ಬೀದರ ಜಿಲ್ಲೆಯಲ್ಲಿ ಕೊರೊನಾ ಪರೀಕ್ಷಾ ಕೇಂದ್ರ

ಬೀದರ ಜಿಲ್ಲೆಯಲ್ಲಿ ಕೊರೊನಾ ಪರೀಕ್ಷಾ ಕೇಂದ್ರ

ಬೀದರ: ಬೀದರ ಜಿಲ್ಲೆಯಲ್ಲಿ ಕೋರೋನಾ ವೈರಾಣು ಪರೀಕ್ಷಾ ಕೇಂದ್ರ ಪ್ರಾರಂಭಕ್ಕೆ ಸರ್ಕಾರ ಸಹಮತ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಪ್ರಭು ಚೌವಾಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷಾ ಕೇಸದ್ರ ಪ್ರಾರಂಭದ ಕೋರಿಕೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಮನ್ನಿಸಿ, ಬೀದರನಲ್ಲಿ ಎರಡು ಪರೀಕ್ಷಾ ಕೇಂದ್ರಗಳನ್ನು ತೆರೆಯಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಬ್ರಿಮ್ಸ್ ನಿರ್ದೇಶಕರಿಗೆ ಸೂಕ್ತ ತಯಾರಿ ಮಾಡಿಕೊಳ್ಳಲು ಸಚಿವರು ಸೂಚಿಸಿದ್ದು, ಶೀಘ್ರದಲ್ಲಿಯೇ ಪರೀಕ್ಷಾ ಕೇಂದ್ರ ಆರಂಭಿಸಲಾಗುತ್ತದೆ.
ಬೀದರ ಜಿಲ್ಲೆಯಲ್ಲಿ ಈಗಾಗಲೇ 13 ಕೊರೊನಾ ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿದ್ದು, ಜಿಲ್ಲೆಯನ್ನು ಹಾಟ್ ಸ್ಪಾಟ್ ಜಿಲ್ಲೆಯಾಗಿ ಗುರುತಿಸಲಾಗಿದೆ. ಇದುವರೆಗೆ ಪ್ರ್ಯಾಮರಿ ಮತ್ತು ಸೆಕೆಂಡರಿ ಸಂಪರ್ಕಕ್ಕೆ ಬಂದವರ ಸಂಖ್ಯೆ ಕೂಡ ಸಾವಿರದ ಗಡಿಯನ್ನು ದಾಟಿದೆ, ಇದು ಬೀದರ ಜಿಲ್ಲೆಗೆ ಎಚ್ಚರಿಕೆಯ ಗಂಟೆಯಾಗಿದೆ.
ಈ ರೀತಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿರುವುದರಿಂದ ರೋಗಿಗಳ ರಕ್ತ ಮತ್ತು ಗಂಟಲು ದ್ರವ ಪರೀಕ್ಷಾ ಕೇಂದ್ರ ಬೆಂಗಳೂರು ಮತ್ತು ಕಲಬುರಗಿಯಲ್ಲಿ ಇದ್ದು, ಪ್ರತಿನಿತ್ಯ ಪರೀಕ್ಷಾ ಕೇಂದ್ರಕ್ಕೆ ರಕ್ತ ಮತ್ತು ಗಂಟಲು ದ್ರವ ಕಳುಹಿಸಿಕೊಡುವುದರಿಂದ ಅವುಗಳ ವರದಿ ಬರುವುದು ತಡವಾಗುತ್ತಿದ್ದು, ಜಿಲ್ಲೆಯ ಜನಪ್ರತಿನಿಧಿಗಳ ಜೊತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತಾವು ನಡೆಸಿದ ಸಭೆಯಲ್ಲೂ ಈ ವಿಷಯ ಪ್ರಸ್ತಾಪವಾಗಿತ್ತು ಎಂದು ಸಚಿವರ ಕಚೇರಿಯ ಪ್ರಕಟಣೆ ತಿಳಿಸಿದೆ

Date: 16-04-2020

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…