Home ನಿಮ್ಮ ಜಿಲ್ಲೆ ಬೀದರ ಬೆಳಗಾವಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಾವು.

ಬೆಳಗಾವಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಾವು.

ಬೆಳಗಾವಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಾವು.

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಗೆ ಅವಮಾನ ಮಾಡಿದ್ದನ್ನು ಖಂಡಿಸಿ ಭಾನುವಾರ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಪೀರನವಾಡಿ ಗ್ರಾಮದಿಂದ ಅನಗೋಳವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ತಡೆದ ಪೊಲೀಸರು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪೂಜೆ ಸಲ್ಲಿಸಿ ಅಲ್ಲಿಂದ ಅನಗೋಳದ ಕನಕದಾಸ ಕಾಲೋನಿ ವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದರು. ನಗರದಲ್ಲಿ 144 ಕಲಂ ಅಡಿ ನಿಷೇಧಾಜ್ಞೆ ಜಾರಿ ಇರುವುದರಿಂದ ಪೊಲೀಸರು ಪಾದಯಾತ್ರೆಗೆ ಅವಕಾಶ ನೀಡದೇ ಪ್ರತಿಭಟನಾನಿರತರನ್ನು ವಶಕ್ಕೆ ಪಡೆದುಕೊಂಡ್ದಾರೆಂದು ಹೇಳಲಾಗಿದೆ.

ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರು ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು. ಬೆಳಗಾವಿಯಲ್ಲಿ ಕಲ್ಲು ತೂರಾಟ ನಡೆಸಿ ಗಲಭೆಗೆ ಕಾರಣರಾದವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Date: 19-12-2021 :

Main

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…