ಮದುವೆಗೆ ಮನೆಯವರ ನಕಾರ – ಪ್ರೇಮಿಗಳ ಆತ್ಮಹತ್ಯೆ.?
ಮದುವೆಗೆ ಮನೆಯವರ ನಕಾರ – ಪ್ರೇಮಿಗಳ ಆತ್ಮಹತ್ಯೆ.?
ಬೀದರ: ಮದುವೆಗೆ ಮನೆಯವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಮನಾಬಾದ ತಾಲೂಕಿನ ಧುಮನಸೂರ್ ಶಿವಾರದಲ್ಲಿ ಭಾನುವಾರ ಬೆಳಕಿಗೆ ಬಂದಿದೆ.
ವರವಟ್ಟಿ ಗ್ರಾಮದ ಶ್ರೀಕಾಂತ್ ಹಾಗೂ ನಿಕಿತಾ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು ಎಂದು ತಿಳಿದುಬಂದಿದ್ದು, ಆತ್ಮಹತ್ಯೆ ಮಾಡಿಕೊಂಡ ಶ್ರೀಕಾಂತ ಹುಮನಾಬಾದ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಪಟ್ಟಿಯಲ್ಲಿದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆಯ ಕುರಿತು ಪೊಲೀಸ್ ಅಧಿಕಾರಿಗಳು ಹೆಚ್ಚಿನ ತನಿಖೆ ಶುರುಮಾಡಿದ್ದಾರೆ.
https://play.google.com/store/apps/details?id=kknewsonline.in
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಸೋಮಲಿಂಗ ಕುಂಬಾರ, ಸಿಪಿಐ ಮಲ್ಲಿಕಾರ್ಜುನ ಯಾತನೂರ್, ಪಿಎಸ್ಐ ರವಿಕುಮಾರ, ಕಿರಣಕುಮಾರ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹುಮನಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿನ ಸುದ್ದಿಗಾಗಿ ಓದಿ ಕಸ್ತೂರಿ ಕಿರಣ ಪತ್ರಿಕೆ
ದಿನಾಂಕ : 20-12-2020 www.kknewsonline.in

ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …
















