ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಉಮೇಶ ಬಿರಬಿಟ್ಟೆ ಅಟ್ಟೂರ್ ಹರ್ಷ
ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಉಮೇಶ ಬಿರಬಿಟ್ಟೆ ಅಟ್ಟೂರ್ ಹರ್ಷ
ಬೀದರ: ಬಹು ವರ್ಷಗಳಿಂದ ಮರಾಠ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹೆಚ್ಚಿನ ಮುತುವರ್ಜಿ ವಹಿಸಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಿಕೊಟ್ಟಿದ್ದಾರೆ ಎಂದು ಬಸವಕಲ್ಯಾಣ ಬಿಜೆಪಿ ಯುವ ಮುಖಂಡ ಹಾಗೂ ಕೇಂದ್ರ ಆಹಾರ ನಿಗಮ ಮಂಡಳಿ ಸದಸ್ಯ ಉಮೇಶ ಬಿರಬಿಟ್ಟೆ ಅಟ್ಟೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯೊಂದಿಗೆ 50 ಕೋಟಿ ಅನುದಾನ ಮೀಸಲಿರಿಸುವ ಮೂಲಕ ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಅಭಿವೃದ್ಧಿ ಕಾರ್ಯಕ್ಕೆ ಪ್ರೋತ್ಸಾಹ ನೀಡಿದ್ದಾರೆ. ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಬಸವಕಲ್ಯಾಣ ಪ್ರವಾಸ ಸಂದರ್ಭದಲ್ಲಿ ಪ್ರತ್ಯೇಕವಾಗಿ ಮರಾಠ ಸಮುದಾಯದ ಮುಖಂಡರ ಸಭೆ ನಡೆಸಿ ವಿವಿಧ ಬೇಡಿಕೆಗಳ ಕುರಿತು ಚರ್ಚೆ ನಡೆಸಿದ ಎರಡು ದಿನಗಳಲ್ಲಿಯೇ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೊಂಡಿದ್ದು, ಹರ್ಷ ಮೂಡಿಸಿದೆ. ಮರಾಟ ಸಮುದಾಯದವರಿಗೂ ನ್ಯಾಯ ದೊರೆತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Date:15-11-2020

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















