ಮಳೆ ಹಾನಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿ : ಜಿಲ್ಲಾಧಿಕಾರಿ ಆರ್.ರಾಮಚಂದ್ರನ್
ಮಳೆ ಹಾನಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿ : ಜಿಲ್ಲಾಧಿಕಾರಿ ಆರ್.ರಾಮಚಂದ್ರನ್
ಬೀದರ: ಹುಮನಾಬಾದ ತಾಲೂಕಿನ 11 ಗ್ರಾಮಗಳಲ್ಲಿ ಸೋಮವಾರ ಸುರಿದ ಭಾರಿ ಮಳೆಯಿಂದ ಸಂಭವಿಸಿರುವ ಬೆಳೆಹಾನಿ ಕುರಿತು ಅಧಿಕಾರಿಗಳು ಸರ್ವೇಕಾರ್ಯ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ಭೋತಗಿ ಹಾಗೂ ಮರಕಲ್ ಗ್ರಾಮಗಳಿಗೆ ಭೇಟಿನೀಡಿ ಮಳೆಹಾನಿ ಸಮೀಕ್ಷೆ ನಡೆಸಿದ ಅವರು, ಕೂಡಲೇ ಸರ್ವೇ ಕಾರ್ಯನಡೆಸಬೇಕು. ಮಳೆಯಿಂದ ಹಾನಿ ಸಂಭವಿಸಿರುವ ಬಗ್ಗೆ ಸಂಪೂರ್ಣ ಮಾಹಿತಿ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದು ತಹಿಶೀಲ್ದಾರ ನಾಗಯ್ಯಾ ಹಿರೇಮಠ ಅವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಇದೇ ಸಂದರ್ಭದಲ್ಲಿ ಶಾಸಕ ರಾಜಶೇಖರ ಪಾಟೀಲ ಮಾತನಾಡಿ, ಸರ್ವೇ ಕಾರ್ಯದಲ್ಲಿ ಅರ್ಹ ರೈತರಿಗೆ ಸರ್ಕಾರದ ಸೌಲಭ್ಯ ದೊರೆಯಬೇಕು. ಮಳೆ ಹಾನಿ ಹಾಗೂ ಕಾರಂಜಾ ಜಲಾಶಯದ ಹಿನ್ನೀರಿನಿಂದ ಉಂಟಾಗುವ ಸಮಸ್ಯೆ, ಪುನವರ್ಸತಿ ಯೋಜನೆಗಳ ಕುರಿತು ವಿಧಾನ ಸಭೆಯಲ್ಲಿ ಚರ್ಚೆ ನಡೆಸುವುದಾಗಿ ತಿಳಿಸಿದರು. ಕೂಡಲೇ ಮಳೆಹಾನಿ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುವ ಕೆಲಸ ಆಗಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಅನೇಕ ರೈತರು ತಮ್ಮ ಸಮಸ್ಯೆಗಳು ಹೇಳಿಕೊಂಡರು.
![]()
Date: 15-09-2020 www.kknewsoniline.in
ಹೆಚ್ಚಿನ ಸುದ್ದಿಗಾಗಿ ಓದಿ ಕಸ್ತೂರಿ ಕಿರಣ ಪತ್ರಿಕೆ
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …
















